Advertisement

ಬೆಳಗಾವಿಯ ಪ್ರಥಮ ಕನ್ನಡ ಮಹಾಪೌರ ಸಿದ್ದನಗೌಡ ಪಾಟೀಲ ಇನ್ನಿಲ್ಲ

01:29 PM Aug 26, 2020 | sudhir |

ಬೆಳಗಾವಿ: ಗಡಿ ಹೋರಾಟಗಾರ ಹಾಗೂ ಬೆಳಗಾವಿಯ ಪ್ರಥಮ ಕನ್ನಡ ಮಹಾಪೌರ ಸಿದ್ದನಗೌಡ ಪಾಟೀಲರು ಬುಧವಾರ ತಮ್ಮ 87ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

Advertisement

ಬೆಳಗಾವಿಯ ಶಿವಬಸವನಗರದ ತಮ್ಮ ನಿವಾಸದಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆಗೆಯ ಸುಮಾರಿಗೆ ನಿಧನ ಹೊಂದಿದ್ದು ಅವರು ಪತ್ನಿ, ದತ್ತು ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬುಧವಾರ ಮಧ್ಯಾಹ್ನ 3 ಗಂಟೆಗೆ ಅವರ ಸ್ವಗ್ರಾಮ ನೇಸರಗಿ ಬಳಿಯ ಮಲ್ಲಾಪೂರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಪರಿಚಯ: 1956 ರಿಂದಲೂ ಕನ್ನಡ ಹೋರಾಟದ ಮುಂಚೂಣಿಯಲ್ಲಿದ್ದ ಅವರು 1984 ರಲ್ಲಿ ಬೆಳಗಾವಿ ಪಾಲಿಕೆಯ ಸದಸ್ಯರಾಗಿ ಆಯ್ಕೆಯಾದರು.1990 ರಲ್ಲಿ ಮತ್ತೆ ಪುನರಾಯ್ಕೆಗೊಂಡರು.1991ರಲ್ಲಿ ಪ್ರಥಮ ಕನ್ನಡ ಮಹಾಪೌರರಾಗಿ ಆಯ್ಕೆಗೊಂಡರು.

ಬೆಳಗಾವಿ ಡಿ.ಸಿ.ಸಿ.ಬ್ಯಾಂಕಿನ ನಿರ್ದೇಶಕರಾಗಿ ಮೂರು ಅವಧಿಗಳವರೆಗೆ ಸೇವೆ ಸಲ್ಲಿಸಿದ್ದ ಅವರು ಕರ್ನಾಟಕ ಗ್ರಾಹಕರ ಮಹಾಮಂಡಳಿಯ ನಿರ್ದೇಶಕರಾಗಿ 20 ವರ್ಷ ಸೇವೆ ಸಲ್ಲಿಸಿದ್ದರು.ಎರಡೂವರೆ ವರ್ಷಗಳ ಕಾಲ ಮಹಾಮಂಡಳದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ನಾಡು,ನುಡಿ,ಗಡಿ ಹೋರಾಟಗಳ ಮುಂಚೂಣಿಯಲ್ಲಿದ್ದ ಅವರು ಇತ್ತೀಚಿನವರೆಗೂ ಹೋರಾಟಗಳಲ್ಲಿ ಭಾಗವಹಿಸುತ್ತಲೇ ಬಂದಿದ್ದರು.

ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ,ಹಿರಿಯ ಹೋರಾಟಗಾರ ರಾಘವೇಂದ್ರ ಜೋಶಿ ಅವರು ಬೆಳಗಾವಿಯ ಕನ್ನಡ ಸಂಘಟನೆಗಳ ಪರವಾಗಿ ಅಂತಿಮ ನಮನ ಸಲ್ಲಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next