Advertisement

Siddapura: ಬಾಲಕನಿಗೆ ಹಲ್ಲೆ ನಡೆಸಿದ ಆರೋಪ; ವ್ಯಕ್ತಿಯ ಬಂಧನಕ್ಕೆ ಆಗ್ರಹ

04:10 PM Jun 23, 2024 | Team Udayavani |

ಸಿದ್ದಾಪುರ: 13 ವರ್ಷದ ಬಾಲಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯನ್ನು ಬಂಧಿಸುವಂತೆ ಆಗ್ರಹಿಸಿ ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.

Advertisement

ಜನ್ಸಾಲೆಯ ಹೆಗ್ಗೇರಿಯ ಶಾಂತಾರಾಮ ಶೆಟ್ಟಿ ನಾರುಮಕ್ಕಿ ಎಂಬವರನ್ನು ಬಂಧಿಸುವಂತೆ ಆಗ್ರಹಿಸಿ ವಿಶ್ವಕರ್ಮ ಸಮಾಜ ಸೇವಾ ಸಂಘಟನೆಯ ನೇತೃತ್ವದಲ್ಲಿ ದೂರು ನೀಡಲಾಗಿದೆ.

ಠಾಣಾ ಸಬ್ ಇನ್ಸ್ ಪೆಕ್ಟರ್ ನಾಸೀರ್ ಹುಸೇನ್ ಮಾತನಾಡಿ, ಆರೋಪಿಯ ಪತ್ತೆಗೆ ಶ್ರಮಿಸುತ್ತಿದ್ದು, ಆತ ಮೊಬೈಲ್ ಮನೆಯಲ್ಲೇ ಇಟ್ಟು ತಪ್ಪಿಸಿಕೊಂಡಿದ್ದಾನೆ. ಪತ್ತೆಗೆ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.

ಈ ಸಂದರ್ಭ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಳಿ ಚಂದ್ರಯ್ಯ ಆಚಾರ್ಯ, 2ನೇ ಮೊಕ್ತೇಸರ ಪ್ರಭಾಕರ ಆಚಾರ್ಯ, ಶಂಕರನಾರಾಯಣ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಉದಯ ಆಚಾರ್ಯ, ಜನ್ಸಾಲೆ ಮಾಗಣೆ ಮೊಕ್ತೇಸರ ಕೃಷ್ಣಯ್ಯ ಆಚಾರ್ಯ, ಹಿಂದೂ ಜಾಗರಣಾ ವೇದಿಕೆಯ ಮುಖಂಡ ಚಂದ್ರ ಆಚಾರ್ಯ ಶಿರಿಯಾರ, ನಮ್ಮ ಭೂಮಿ ಸಂಸ್ಥೆಯ ಗಣೇಶ್ ಶೆಟ್ಟಿ, ಉಳ್ಳೂರು 74 ಮಾಗಣೆಯ ಮೊಕ್ತೇಸರ ರಾಘವೇಂದ್ರ ಆಚಾರ್ಯ, ಮಾಜಿ ಮೊಕ್ತೇಸರ ಸತೀಶ್ ಆಚಾರ್ಯ ಉಳ್ಳೂರು, ಹಳ್ಳಾಡಿ ವಿಶ್ವಕರ್ಮ ಸಮಾಜ ಸೇವಾ ಸಂಘ ದ. ಅಧ್ಯಕ್ಷ ಜಯರಾಮ ಆಚಾರ್ಯ, ಅಮಾಸೆಬೈಲು ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ರತ್ನಾಕರ ಆಚಾರ್ಯ ಕೆಲ, ಶಂಕರನಾರಾಯಣ ವಿಶ್ವಕರ್ಮ ಸಮಾಜ ಸೇವಾ ಸಂಘದ ಕಾರ್ಯದರ್ಶಿ ಮಂಜುನಾಥ ಆಚಾರ್ಯ ಕಾರೆಬೈಲು, ನಾಗರಾಜ ಆಚಾರ್ಯ ಗೋಳಿಯಂಗಡಿ, ಪ್ರಕಾಶ್ ಆಚಾರ್ಯ ಕೊಕ್ಕರ್ಣೆ ಹಲ್ಲೆಗೊಳಗಾದ ಬಾಲಕನ ತಂದೆ ರಾಘವೇಂದ್ರ ಆಚಾರ್ಯ, ತಾಯಿ ಪ್ರತಿಮಾ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next