Advertisement

Siddapura; ಬೈಕುಗಳ ಢಿಕ್ಕಿ; ಸವಾರರು ಗಂಭೀರ

11:47 PM Feb 12, 2024 | Team Udayavani |

ಸಿದ್ದಾಪುರ: ರಾಜ್ಯ ಹೆದ್ದಾರಿಯ ಸಿದ್ದಾಪುರ ಗ್ರಾಮದ ಜೆ.ಎಂ.ಜೆ ಗ್ಯಾರೇಜ್‌ ಬಳಿ ಫೆ. 10ರಂದು ಅತೀ ವೇಗವಾಗಿ ಸಹ ಸವಾರರನ್ನು ಕುಳ್ಳಿರಿಸಿಕೊಂಡು ಬಂದ ಬೈಕ್‌ ಸವಾರ ಮತ್ತೊಂದು ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಸವಾರರು ಹಾಗೂ ಸಹ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಸಹ ಸವಾರರನ್ನು ಕುಳ್ಳಿರಿಸಿಕೊಂಡು ಅತೀವಾಗಿ ಬಂದ ಬೈಕ್‌ ಸವಾರ ತನ್ನ ಬೈಕಿಗೆ ಢಿಕ್ಕಿ ಹೊಡೆಸಿದ್ದಾರೆ ಎಂದು ಗೋಪಾಲ (47) ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಗಂಭೀರವಾಗಿ ಗಾಯಗೊಂಡ ಗೋಪಾಲ ಅವರು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next