Advertisement

Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು

01:11 AM Mar 19, 2024 | Team Udayavani |

ಸಿದ್ದಾಪುರ: ಕೃಷಿಕ ಹೆಂಗವಳ್ಳಿ ಗ್ರಾಮದ ಮರೂರು ಕೃಷ್ಣ (58)ಅವರು ಫೆ. 28ರಂದು ಮನೆಯ ತೋಟದಲ್ಲಿರುವ ಮಾವಿನ ಮರದಲ್ಲಿ ಮಾವಿನ ಕಾಯಿ ಕೊಯ್ಯುವಾಗ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮಾ. 17ರಂದು ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

Advertisement

ಗಂಭೀರವಾಗಿ ಗಾಯಗೊಂಡ ಕೃಷ್ಣ ಅವರನ್ನು ಕೂಡಲೇ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮಾ. 17ರಂದು ಆಸ್ಪತ್ರೆಯಲ್ಲಿ ಮೃತಪಟ್ಟರು. ಸಹೋದರಿ ಪಾರ್ವತಿ ನೀಡಿದ ದೂರಿನಂತೆ ಶಂಕರ ನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next