ಸಿದ್ದಾಪುರ: ಸಿದ್ದಾಪುರ ಗ್ರಾಮದ ಚೀನಾನೇರು ಭಾಸ್ಕರ ಶೆಟ್ಟಿ ಅವರ ಮನೆಯ ಅಡಿಕೆ ತೋಟದಲ್ಲಿ ಅಡಿಕೆ ಮರದಿಂದ ಅಡಿಕೆ ಕೊಯ್ಯುತ್ತಿರುವ ಕಾರ್ಮಿಕ ಯಡಮೊಗೆ ಗ್ರಾಮದ ಈರಕ್ಲಾಡಿ ಬಾಬು ನಾಯ್ಕ (60) ಅವರು ಅಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಅವರನ್ನು ಕೂಡಲೇ ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಅಜ್ಜರಕಾಡುವಿನ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮೃತಪಟ್ಟರು.
ಪುತ್ರ ಸುರೇಶ ನಾಯ್ಕ ಅವರು ನೀಡಿರುವ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.