Advertisement

ಸಿದ್ದರಾಮನಹುಂಡಿ ಗಲಾಟೆ; 10 ಮಂದಿಯ ಮೇಲೆ ಪ್ರಕರಣ ದಾಖಲು

10:20 PM Apr 28, 2023 | Team Udayavani |

ಮೈಸೂರು : ವರುಣಾ ಕ್ಷೇತ್ರದ ಸಿದ್ದರಾಮನಹುಂಡಿ ಗ್ರಾಮದಲ್ಲಿ ಗುರುವಾರ ರಾತ್ರಿ ಗಲಾಟೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯ ಮೇಲೆ ಪ್ರಕರಣ ದಾಖಲಿಸಿರುವುದಾಗಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

Advertisement

ಘಟ‌ನೆ ಸಂಬಂಧ 10 ಜನರ ಮೇಲೆ 107 ಕಾಯ್ದೆ ಅಡಿ ಕೇಸ್ ದಾಖಲಾಗಿದೆ.ಅವರ ಮೇಲೆ ಯಾವುದಾದರೂ ಕ್ರಿಮಿನಲ್ ಹಿನ್ನೆಲೆ ಇದ್ದರೆ ಅಂತವರ‌ನ್ನು ಗಡಿಪಾರು ಮಾಡಲಾಗುವುದು.ಸದ್ಯಕ್ಕೆ ಪ್ರಕರಣದ ತನಿಖೆಯಾಗುತ್ತಿದೆ.ವಿಡಿಯೋ ದೃಶ್ಯಾವಳಿ ಪರಿಶೀಲನೆ ಮಾಡಲಾಗುತ್ತಿದೆ. ಮೇಲ್ನೋಟಕ್ಕೆ ಘರ್ಷಣೆಯಾಗಿರುವುದು ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಸದ್ಯಕ್ಕೆ ಈ ಎಲ್ಲದರ ಬಗ್ಗೆಯೂ ತನಿಖೆಯಾಗುತ್ತಿದೆ. ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ತನಿಖೆಯಾಗುತ್ತಿದೆ. ತನಿಖೆ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ವರುಣಾ ವಿಧಾನಸಭಾ ಕ್ಷೇತ್ರದ ಪ್ರಚಾರಕ್ಕೆ ತೆರಳಿದ್ದ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಜಿಪಂ ಮಾಜಿ ಅಧ್ಯಕ್ಷ ಪುಟ್ಟಬುದ್ಧಿ ಅವರ ಅಣ್ಣನ ಮಗ ಕೀಳನಪುರದ ನಾಗೇಶ್‌ (26)ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next