ಮೈಸೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ, ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಸಿಎಂ ಆಗಲಿದ್ದಾರೆ ಎಂದು ಸೋಮವಾರ ಹೇಳಿಕೆ ನೀಡಿದ್ದಾರೆ.
ಸುತ್ತೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಸಚಿವ ಎಂ ಬಿ ಪಾಟೀಲ್, ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ.ಸಿಎಂ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ.ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಸಿಎಂ ಆಗಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದರು.
ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದಿರುವ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ.ಪಿಎಸ್ ಐ ನೇಮಕಾತಿ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತೇವೆ.ಎಲ್ಲಾ ಹಗರಣಗಳನ್ನು ಲಾಜಿಕ್ ಎಂಡ್ ಗೆ ತೆಗೆದುಕೊಂಡು ಹೋಗುತ್ತೇವೆ.ತಪ್ಪಿಸ್ಥ ರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದರು.
ಗ್ಯಾರೆಂಟಿ ಕಾರ್ಡ್ ವಿಚಾರಕ್ಕೆ ಪ್ರತಿಕ್ರಿಯಿಸಿ ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಆಗಿದೆ, ತಾತ್ವಿಕ ಒಪ್ಪಿಗೆ ನೀಡಲಾಗಿದೆ.ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದರು.