Advertisement

ರಾಮಮಂದಿರ ನಿರ್ಮಾಣಕ್ಕೆ ಸಿದ್ದರಾಮಯ್ಯ ಸಹ ದೇಣಿಗೆ ಕೊಟ್ಟಿದ್ದಾರೆ: ಎಸ್ ಟಿ ಸೋಮಶೇಖರ್

12:02 PM Feb 22, 2021 | Team Udayavani |

ಮೈಸೂರು: ಶ್ರೀರಾಮ ಮಂದಿರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ದೇಣಿಗೆ ಕೊಟ್ಟಿದ್ದಾರೆ. ಆದರೆ ಬಹಿರಂಗವಾಗಿ, ಸಾರ್ವಜನಿಕವಾಗಿ ಅವರು ಹೇಳಿಕೆ ನೀಡುತ್ತಿಲ್ಲ. ಸರ್ಕಾರ ಸುಗಮವಾಗಿ ಆಡಳಿತ ನಡೆಸುತ್ತಿರುವುದಕ್ಕೆ ಅವರಿಗೆ ಯಾವುದೇ ರೀತಿ ಮಾತನಾಡಲು ಆಗದ್ದರಿಂದ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ  ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

Advertisement

ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸುವ ಲಿಫ್ಟ್ ಅನ್ನು ರೈಲ್ವೇ ಇಲಾಖೆ ದೇವಸ್ಥಾನಕ್ಕೆ ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆ ನೀಡಿದ ಸಚಿವರು, ಸರ್ಕಾರ ಸುಗಮವಾಗಿ, ದಕ್ಷವಾಗಿ ಹೋಗುತ್ತಿದೆ. ಮಾತನಾಡಲೂ ಏನೂ ಉಳಿದಿಲ್ಲವಾದ್ದರಿಂದ ಇಂತಹ ಹೇಳಿಕೆ ಕೊಡುತ್ತಿದ್ದಾರೆ. ಇವರು ಬಾಯಿ ಚಪಲಕ್ಕೆ ಲೆಕ್ಕ ಕೇಳುತ್ತಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ:ಯತ್ನಾಳ್ ರಿಗೆ ದೆಹಲಿಗೆ ಬುಲಾವ್ ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ: ಸಚಿವ ಬಿ.ಸಿ.ಪಾಟೀಲ್

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಯಾರೂ ಸಹ ಬಲವಂತವಾಗಿ ದೇಣಿಗೆ ಸಂಗ್ರಹಿಸುತ್ತಿಲ್ಲ. ಪ್ರತಿಯೊಂದು ಪೈಸೆ ಸಹ ರಾಮ ಮಂದಿರಕ್ಕೆ ಉಪಯೋಗವಾಗಲಿದೆ ಹಾಗೂ ಎಲ್ಲವಕ್ಕೂ ಲೆಕ್ಕವನ್ನು ಇಡಲಾಗಿದೆ. ದೇಣಿಗೆ ಸಂಗ್ರಹಿಸಿದ ಮನೆಯ ಸಂಖ್ಯೆ, ಸಹಿ ಪಡೆದು, ಪ್ಯಾನ್ ಸಂಖ್ಯೆಯನ್ನು ನಮೂದಿಸಲಾಗುತ್ತಿದೆ. ಜೊತೆಗೆ ರಶೀದಿಯನ್ನು ಸಹ ಕೊಡಲಾಗುತ್ತಿದೆ. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ದೇಣಿಗೆಯನ್ನು ಜನರು ಸ್ವಯಂಪ್ರೇರಿತರಾಗಿ ಕೊಡುತ್ತಿದ್ದಾರೆ ಎಂದು ಸಚಿವರು ಹೇಳಿದರು.

ವಿರೋಧ ಪಕ್ಷದವರು ಹೇಳಿದಂತೆ ರಾಮ ಮಂದಿರಕ್ಕೆ ನೀಡಿದ ದೇಣಿಗೆಯ ಹಣ ದುರುಪಯೋಗವಾಗಿಲ್ಲ. ಖಂಡಿತವಾಗಿಯೂ ದೇಣಿಗೆಯ ಲೆಕ್ಕ ಸಿಗಲಿದೆ ಎಂದು ಎಸ್ ಟಿ ಸೋಮಶೇಖರ್ ತಿಳಿಸಿದರು.

Advertisement

ಇದನ್ನೂ ಓದಿ: ನಕಲಿ… ನಕಲಿ… ಇಲ್ಲಿ ಎಲ್ಲವೂ ನಕಲಿ… : ಅಸಲಿಯನ್ನೂ ಮರೆಮಾಚಿಸುವ ನಕಲಿ ಜಾಲ

Advertisement

Udayavani is now on Telegram. Click here to join our channel and stay updated with the latest news.

Next