Advertisement

ಸಿದ್ದರಾಮಯ್ಯ- ಡಿಕೆಶಿಯಿಂದ ಕೊಳಕು ರಾಜಕಾರಣ: ಸಚಿವ ಸುರೇಶ ಅಂಗಡಿ

04:10 PM Jul 24, 2020 | keerthan |

ಬೆಳಗಾವಿ: ದೇಶದಲ್ಲಿ ಭ್ರಷ್ಟಾಚಾರದ ಜನಕ ಹಾಗೂ ಅಧಿಪತಿ ಕಾಂಗ್ರೆಸ್ ಆಗಿದೆ. ಅಂಥದರಲ್ಲಿ ಆ ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಸುಳ್ಳು ಆರೋಪ ಮಾಡುವ ಮೂಲಕ ಕೊಳಕು ರಾಜಕಾರಣ ಮಾಡುತ್ತಿದ್ದಾರೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ವಾಗ್ದಾಳಿ ನಡೆಸಿದರು.

Advertisement

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಹುರುಳಿಲ್ಲದೇ ಆರೋಪ  ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದರಲ್ಲಿ ನೈತಿಕತೆ ಇಲ್ಲ ಎಂದು  ಕಿಡಿಕಾರಿದರು.

ಇಲ್ಲಸಲ್ಲದ ಆರೋಪಗಳನ್ನು ಮಾಡುವುದು ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಶೋಭೆ ತರುವುದಿಲ್ಲ. ಅವರಿಬ್ಬರೂ ಆತ್ಮಾವಲೋಕನ ಮಾಡಿಕೊಳ್ಳಲಿ. ಕಾಂಗ್ರೆಸ್ ನಾಯಕರು ಕೊಳಕು ರಾಜಕಾರಣ ಮಾಡುವುದನ್ನು ಬಿಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ದೇಶ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಕೋವಿಡ್-19 ಸೋಂಕು ಬಂದಾಗುನಿಂದ ದೇಶದಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ.  ಸೋಂಕಿನ ವಿರುದ್ಧ ಎಲ್ಲರೂ ಹೋರಾಡಬೇಕು. ಕೋವಿಡ್ ಮುಕ್ತ ದೇಶ ಮಾಡಲು ಪ್ರತಿಯೊಬ್ಬರೂ ಶ್ರಮಿಸಬೇಕು. ಎಲ್ಲ ರಾಜಕಾರಣಿಗಳು ಪಕ್ಷಾತೀತವಾಗಿ ಕೆಲಸ ಮಾಡಬೇಕಿದೆ. ಇಂಥ ಸ್ಥಿತಿಯಲ್ಲಿ ಕಾಂಗ್ರೆಸ್‌ನವರು ಚಿಲ್ಲರೆ ರಾಜಕಾರಣ ಮಾಡಿ ಜಮರ ದಿಕ್ಕು ತಪ್ಪಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಉತ್ತಮ ಕೆಲಸ ಮಾಡುತ್ತಿವೆ. ಜನರ‌ ಕಣ್ಣೀರು ಒರೆಸುವ ಕೆಲಸ ಮಾಡಲಾಗುತ್ತಿದೆ. ಬೇರೆ ವಿಷಯಗಳ ಬಗ್ಗೆ ಟೀಕಿಸಲು ಅವಕಾಶ ಇಲ್ಲವಾಗಿದೆ. ಹೀಗಾಗಿ ಇಂಥ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

Advertisement

ಬಿಮ್ಸ್‌ ಆಸ್ಪತ್ರೆಯಲ್ಲಿ ನಡೆದ ಗಲಾಟೆ ಪೂರ್ವಯೋಜಿತ ಇದ್ದಂತಡ ಎನಿಸುತ್ತಿದೆ. ಸೋಂಕಿತರ ಬಗ್ಗೆ ವಿಶೇಷ ಕಾಳಜಿ‌ ಇಟ್ಟುಕೊಂಡು ಹಗಲಿರುಳು ಶ್ರಮಿಸುತ್ತಿರುವ ವೈದ್ಯರ ಸೇವೆ ನಿಜಕ್ಕೂ ಶ್ಲಾಘನೀಯ. ಆದರೆ ವೈದ್ಯರ ಮೇಲೆ ಇಂಥ ದಾಳಿ ನಡೆದಿರುವುದು ಅಮಾನವೀಯ ಕೃತ್ಯವಾಗಿದೆ. ರೋಗಿ ಮೃತಪಟ್ಟ ಅರ್ಧ ಗಂಟೆಯಲ್ಲಿ ಅಷ್ಟೊಂದು ಜನರು ಹೇಗೆ ಬಂದರು. ಕಲ್ಲು ತೂರಾಟ ನಡೆಸಿ ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿದ್ದಾರೆ. ಘಟನೆಯ ಹಿಂದಿರುವ ಶಕ್ತಿಗಳನ್ನು ಪೊಲೀಸರು ಪತ್ತೆ ಹಚ್ಚಬೇಕು. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ಗಲಾಟೆ ಮಾಡಿದವರು ದೇಹದ್ರೋಹಿಗಳು ಎಂದು ಗಂಭೀರ ಆರೋಪ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next