Advertisement
-ಇದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹೊಸ ದಾಗಿ ಅಧಿಕಾರ ಸ್ವೀಕರಿಸಿದ ಪಕ್ಷದ ಕಾರ್ಯಾಧ್ಯಕ್ಷರು, ಚುನಾವಣ ಪ್ರಚಾರ ಸಮಿತಿ ಅಧ್ಯಕ್ಷರಿಗೆ ನೀಡಿದ ಎಚ್ಚರಿಕೆ.
Related Articles
Advertisement
ಸಿಎಂ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಎಂ.ಜಾನ್ ಮತ್ತಿತರರಿದ್ದರು.
ಅಧಿಕಾರ ಸ್ವೀಕಾರಚುನಾವಣ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ, ನೂತನ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ವಿನಯ್ ಕುಲಕರ್ಣಿ, ಜಿ.ಸಿ.ಚಂದ್ರಶೇಖರ್, ವಸಂತಕುಮಾರ್, ಮಂಜುನಾಥ ಭಂಡಾರಿ ಅಧಿಕಾರ ಸ್ವೀಕರಿಸಿದರು. ಸಿ.ಎಂ.ಇಬ್ರಾಹಿಂ ಪುತ್ರ ಕಾಂಗ್ರೆಸ್‌ಗೆ
ಜೆಡಿಎಸ್ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಪುತ್ರ ಸಿ.ಎಂ.ಫಯಾಜ್, ಮಾಜಿ ಸಚಿವ ಆರ್.ಶಂಕರ್, ತುಮಕೂರಿನ ಗೋವಿಂದರಾಜು, ಕೊರಟಗೆರೆಯ ಜೆಡಿಎಸ್‌ನ ಪ್ರೇಮಾ ಮಹಾಲಿಂಗಪ್ಪ, ಬೋರೇಗೌಡ ಮತ್ತಿತರರು ಕಾಂಗ್ರೆಸ್ ಸೇರಿದರು. ನಾನೇ ಸಾಕ್ಷಿ: ಮಂಜುನಾಥ ಭಂಡಾರಿ
ಕಾಂಗ್ರೆಸ್‌ನಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತ ಕೂಡ ಉನ್ನತ ಸ್ಥಾನ ತಲುಪಬಹುದು ಎಂಬುದಕ್ಕೆ ನಾನೇ ಸಾಕ್ಷಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದರು. ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯಸಭೆ ಮಾಜಿ ಸದಸ್ಯ ದಿ| ಆಸ್ಕರ್ ಫೆರ್ನಾಂಡಿಸ್ ನನ್ನನ್ನು ಮೊದಲ ಬಾರಿಗೆ ಗುರುತಿಸಿದ್ದರು. ಅನಂತರ ಸ್ಥಳೀಯವಾಗಿ ಸಂಘಟನೆ ಚಟುವಟಿಕೆಗಳಲ್ಲಿ ಕ್ರಿಯಾಶೀಲನಾಗಿದ್ದೆ. ಸುಮಾರು 22 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದೇನೆ. ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದ ಅವಕಾಶ ಇದ್ದರೂ ಬೇಡವೆಂದು ಹೇಳಿದ್ದೆ. ಇಂದು ಕಾರ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ್ದೇನೆ. ನನ್ನಂತಹ ಒಬ್ಬ ಸಾಮಾನ್ಯ ಕಾರ್ಯಕರ್ತ ಕೂಡ ಪಕ್ಷದ ಉನ್ನತ ಸ್ಥಾನ ತಲುಪಬಹುದು ಎಂಬುದಕ್ಕೆ ನಾನೇ ಸಾಕ್ಷಿ. ಇದು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯ ಎಂದರು. ಚನ್ನಪಟ್ಟಣ: 9 ನಗರಸಭೆ ಸದಸ್ಯರು ಕಾಂಗ್ರೆಸ್‌ಗೆ
ಚನ್ನಪಟ್ಟಣ: ಚುನಾವಣೆ ಬಿಸಿ ತಾರಕಕ್ಕೇರಿರುವ ಬೆನ್ನಲ್ಲೇ, ಎಚ್.ಡಿ. ಕುಮಾರ ಸ್ವಾಮಿ ಹಾಗೂ ಸಿ.ಪಿ.ಯೋಗೇಶ್ವರ್‌ಗೆ ಆಘಾತ ನೀಡಿರುವ ಡಿ.ಕೆ.ಸಹೋದರರು, ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಸಹಿತ ಜೆಡಿಎಸ್‌ನ 9 ಮಂದಿ ಸದಸ್ಯರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿದ್ದಾರೆ. ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್ ಹಾಗೂ ಸದಸ್ಯರಾದ ಸಯ್ಯದ್ ರಫೀಕ್ ಅಹಮದ್, ಅಭಿದಾ ಬಾನು, ನಾಗೇಶ್, ರೇವಣ್ಣ, ಸತೀಶ್ ಬಾಬು, ಲೋಕೇಶ್, ಭಾನುಪ್ರಿಯ, ಪಕ್ಷೇತರ ಸದಸ್ಯೆ ಉಮಾ ಕಾಂಗ್ರೆಸ್ ಸೇರಿದವರು.