Advertisement

ಉಡುಪಿ ಭೇಟಿ ರದ್ದು, ಸಿಎಂ ಸಿದ್ದರಾಮಯ್ಯ, ಪರಂ ರಹಸ್ಯ ಸ್ಥಳಕ್ಕೆ!

12:43 PM Jun 18, 2017 | Team Udayavani |

ಬೆಂಗಳೂರು/ಉಡುಪಿ: ದೇಶದ ಪ್ರಥಮ ಪ್ರಜೆ ಪ್ರಣಬ್ ಮುಖರ್ಜಿ ಅವರು ನಿಗದಿಯಂತೆ ಭಾನುವಾರ ಬೆಳಗ್ಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದಾರೆ. ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಕೃಷ್ಣಮಠ ಭೇಟಿಯನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಿ ರಹಸ್ಯ ಸ್ಥಳಕ್ಕೆ ತೆರಳಿ ಮಾತುಕತೆ ನಡೆಸುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಇಂದು ಬೆಳಗ್ಗೆ ಬೆಂಗಳೂರಿನಿಂದ ಆಗಮಿಸಲು ಹೊರಟಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಎಚ್ಎಎಲ್ ವಿಮಾನ ನಿಲ್ದಾಣದವರೆಗೆ ಬಂದು ಬೀಳ್ಕೊಟ್ಟಿದ್ದರು. ಅಲ್ಲಿಂದ ಸಿಎಂ ಮತ್ತು ಪರಮೇಶ್ವರ್ ನಿರ್ಗಮಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ನಿವಾಸಕ್ಕೆ ಕಾವೇರಿಗೆ ಆಗಮಿಸಿ ಅಲ್ಲಿಂದ ಭದ್ರತಾ ಪಡೆಗಳನ್ನು ವಾಪಸ್ ಕಳುಹಿಸಿ ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ ಎಂದು ವರದಿ ವಿವರಿಸಿದೆ.

ತಿಂಡಿ ನೆಪದಲ್ಲಿ ರಹಸ್ಯ ಮಾತುಕತೆ?
ತಿಂಡಿ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರು ರಹಸ್ಯ ಸ್ಥಳಕ್ಕೆ ತೆರಳಿ ಮಾತುಕತೆ ನಡೆಸುತ್ತಿದ್ದಾರೆ. ವಿಧಾನಮಂಡಲದ ಕಲಾಪದಲ್ಲಿ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆಗಾದ ಸೋಲು ಹಾಗೂ ಅಧಿವೇಶನದ ನಂತರ ಗೃಹ ಖಾತೆಯನ್ನು ಯಾರಿಗೆ ವಹಿಸಬೇಕೆಂಬ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಸಿಎಂ ಮತ್ತು ಪರಮೇಶ್ವರ್ ರಹಸ್ಯವಾಗಿ ಯಾವ ವಿಚಾರದ ಕುರಿತು ಚರ್ಚೆ ನಡೆಸಿದ್ದಾರೆಂಬುದು ಖಚಿತವಾಗಿ ತಿಳಿದು ಬಂದಿಲ್ಲ.

ಏತನ್ಮಧ್ಯೆ ಸಿಎಂ ಸಿದ್ದರಾಮಯ್ಯನವರು ಉಡುಪಿ ಕೃಷ್ಣಮಠಕ್ಕೆ ರಾಷ್ಟ್ರಪತಿ ಜತೆ ಭೇಟಿ ಕೊಡದೆ ಬೆಂಗಳೂರಿನಲ್ಲಿಯೇ ಉಳಿದುಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆಗಳು ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಉಡುಪಿ ಕೃಷ್ಣ ಮಠಕ್ಕೆ ಭೇಟಿ ಕೊಡದೆ ಇರುವುದಕ್ಕೆ ಕಾರಣವೇನು? ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next