Advertisement
ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಇವರ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ನೂತನವಾಗಿ ನಿರ್ಮಿಸಿರುವ ದೊಡ್ಡ ಕವಲಂದೆ, ಜೈಪುರ ಹಾಗೂ ಅಂತರಸಂತೆ ಠಾಣೆಗಳ ಸಮಾರಂಭವನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
Related Articles
Advertisement
ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.
ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು ಎಂದರು.
ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಮಾತನಾಡಿ ಇಂದು ಕವಲಂದೆ,ಅಂತರಸಂತೆ ಹಾಗೂ ಜಯಪುರ ಠಾಣೆಗಳನ್ನು 4 ಕೋಟಿ 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದ್ದು,ಆಧುನಿಕತೆಗೆ ತಕ್ಕಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ನೀಡಲಾಗಿದೆ. ನಮ್ಮ ಸರ್ಕಾರ ಬಂದ ನಂತರ ಇಲಾಖೆಯಲ್ಲಿ ಹಲವಾರು ಬದಲಾವಣೆ ಆಗಿದ್ದು ಶೇ.40ರಷ್ಟು ಸಿಬ್ಬಂದಿಗಳಿಗೆ ಪೊಲೀಸ್ ಗೃಹ ಹೆಸರಿನಲ್ಲಿ ವಸತಿ ಗೃಹಗಳನ್ನು ನೀಡಲಾಗಿದ್ದು ಹಂತ ಹಂತವಾಗಿ ಉಳಿದ ಸಿಬ್ಬಂದಿಗಳಿಗೂ ವಸತಿ ಸೌಕರ್ಯ ಕಲ್ಪಿಸಲಾಗುವುದು ಎಂದರು.
ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ಇಲಾಖೆಯ ಸಿಬ್ಬಂದಿಗಳು ಎಲ್ಲರಂತೆ ಜೀವಿಸಬೇಕು ಹಾಗಾಗಿ ಸಿಬ್ಬಂದಿಗೆ ಯೋಗಕ್ಷೇಮವೂ ಮುಖ್ಯ
ಇಲಾಖೆ ಆಧುನಿಕ ತಂತ್ರಜ್ಞಾನವನ್ನು ಅಳವಡಿಕೊಂಡು ಅಪರಾಧ ಪತ್ತೆಹಚ್ಚುವಲ್ಲಿ ಮುಂಚೂಣಿಯಲ್ಲಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಪ್ರಕರಣಗಳನ್ನು ಸಂಭವಿಸಿದ 24ಗಂಟೆಯೊಳಗೆ ಭೇದಿಸಲಾಗಿದೆ. ಹಾಗಾಗಿ ನಮ್ಮ ಪೊಲೀಸರು ಹೆಚ್ಚು ದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಮಾನ್ಯ ಮುಖ್ಯಮಂತ್ರಿಗಳು ಇಲಾಖೆಗೆ ಸಾಕಷ್ಟು ಹಣಕಾಸಿನ ನೆರವು ನೀಡಿ ಇಲಾಖೆ ಬಲಗೊಳ್ಳಲು ಸಹಕರಿಸಿದ್ದಾರೆ. ನಮ್ಮ ಸರ್ಕಾರ ನುಡಿದಂತೆ ನಡೆದಿದ್ದು, ಜನಸ್ನೇಹಿಯಾಗಿದೆ ಎಂದರು.
ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಮುಖ್ಯ ಅತಿಥಿಗಳಾಗಿದ್ದರು.
ಶಾಸಕರಾದ ಅನಿಲ್ ಚಿಕ್ಕಮಾದು, ರವಿಶಂಕರ್,ತಿಮ್ಮಯ್ಯ ಎ.ಆರ್.ಕೃಷ್ಣಮೂರ್ತಿ, ಆಶ್ರಯ ಸಮಿತಿ ಅಧ್ಯಕ್ಷರಾದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ , ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.