Advertisement

ಮಧ್ಯರಾತ್ರಿ ಕಾಂಗ್ರೆಸ್ ನಾಯಕರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ

07:52 AM Aug 03, 2022 | Team Udayavani |

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 75ನೇ ವಸಂತಕ್ಕೆ ಕಾಲಿಟ್ಟಿದ್ದು ಆ ಹಿನ್ನೆಲೆಯಲ್ಲಿ ಮಧ್ಯರಾತ್ರಿ 12 ಗಂಟೆಗೆ ಸರಿಯಾಗಿ ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಕೇಕ್​ ಕತ್ತರಿಸುವ ಮೂಲಕ ಕಾಂಗ್ರೆಸ್​ ನಾಯಕರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ಹುಟ್ಟುಹಬ್ಬ ಆಚರಿಸಿಕೊಂಡರು.

Advertisement

ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆ.ಜೆ. ಜಾರ್ಜ್​ ಮತ್ತು ಆರ್​.ವಿ. ದೇಶಪಾಂಡೆ ಸೇರಿದಂತೆ ಅನೇಕ ಕಾಂಗ್ರೆಸ್​ ನಾಯಕರು ಸಿದ್ದು ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗಿಯಾದರು.

75ನೇ ವಸಂತದ ಸಂಭ್ರಮಾಚರಣೆಗೆ ದಾವಣಗೆರೆಯಲ್ಲಿ ಇಂದು ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಹ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಜನರು ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ದಾವಣಗೆರೆಯಲ್ಲಿ ಬೃಹತ್​ ವೇದಿಕೆ ಸಜ್ಜಾಗಿದೆ.

ಇದನ್ನೂ ಓದಿ : ಮತ್ತೆ ಯುದ್ಧ ಭೀತಿ; ಅಮೆರಿಕ-ಚೀನ ನಡುವೆ ತೀವ್ರಗೊಂಡ ಸಂಘರ್ಷ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next