ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ ಸಂಜೆ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಕರೆದಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸಂಜೆ ಆರು ಗಂಟೆಗೆ ಸಭೆ ನಡೆಯಲಿದ್ದು, ಹಿಜಾಬ್ ವಿಚಾರದಲ್ಲಿ ಪಕ್ಷದ ನಿಲುವು ಏನಿರಬೇಕೆಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಇದನ್ನೂ ಓದಿ:ರೈತನಿಗೆ ಸಿಗದ ಪರಿಹಾರ ಹಣ; ಕಲಬುರಗಿ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ
ಹಿಜಾಬ್ ವಿಚಾರಕ್ಕೆ ಸಂಬಂಧಪಟ್ಟಂತೆ ಪಕ್ಷದ ಯಾವುದೇ ಶಾಸಕರು ಮಾತನಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಟ್ಟಪಣೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ಸಭೆ ಕರೆದಿರುವುದು ಕುತೂಹಲಕ್ಕರ ಕಾರಣವಾಗಿದೆ. ಈ ವಿಚಾರದಲ್ಲಿ ಆರಂಭದಿಂದಲೂ ಶಿವ ಕುಮಾರ್ ಹಾಗೂ ಸಿದ್ದರಾಮಯ್ಯ ಮಧ್ಯೆ ಭಿನ್ನಾಭಿಪ್ರಾಯ ಇದೆ ಎಂದು ಹೇಳಲಾಗುತ್ತಿದೆ.
ಸಭೆಗೆ ಬರುವಂತೆ ಸಿದ್ದರಾಮಯ್ಯ ತಮ್ಮ ಆಪ್ತ ಜಮೀರ್ ಅಹ್ಮದ್ ಖಾನ್ ಗೂ ಆಹ್ವಾನ ನೀಡಿದ್ದಾರೆ. ಹಿಜಾಬ್ ಬಗ್ಗೆ ಜಮೀರ್ ನೀಡಿದ ಹೇಳಿಕರ ಬಗ್ಗೆ ಸೋಮವಾರ ಡಿ.ಕೆ.ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಹಿಜಾಬ್ ವಿವಾದವನ್ನು ಸದನದಲ್ಲಿ ಯಾವ ರೀತಿ ಪ್ರಸ್ತಾಪಿಸಬೇಕು ? ನ್ಯಾಯಾಲಯ ಅಂತಿಮ ಆದೇಶ ನೀಡಿದರೆ ಪಕ್ಷದ ನಿಲುವು ಏನಿರಬೇಕೆಂಬ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ.