Advertisement

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ

06:08 PM May 17, 2020 | keerthan |

ಬೆಂಗಳೂರು: ಕೋವಿಡ್-19 ಸೇರಿಂದತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

Advertisement

ಮಂಗಳವಾರ ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಕೋವಿಡ್ ಸೋಂಕಿನಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಗಳು, ಎಪಿಎಂಸಿ ಕಾಯಿದೆಗೆ ತಿದ್ದುಪಡಿ, ಗ್ರಾಮ ಪಂಚಾಯಿತಿ ಚುನಾವಣೆ, ಮಾತೃಶ್ರೀ, ಸಾಂತ್ವನ ಸೇರಿದಂತೆ ವಿವಿಧ ಯೋಜನೆಗಳ ರದ್ದು ಹಾಗೂ ನಾನಾ  ವಿಷಯಗಳ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ.

ಸರ್ಕಾರ ಕೈಗೊಂಡಿರುವ ಕ್ರಮಗಳು, ಮುಂದೆ ಕೈಗೆತ್ತಿಕೊಳ್ಳಬೇಕಾದ ಹೋರಾಟದ ಬಗ್ಗೆಯೂ ಸಭೆ ಚರ್ಚಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next