Advertisement

Luck ಇದ್ದರೆ ಸಿದ್ದರಾಮಯ್ಯ ಪ್ರಧಾನಿಯಾಗಬಹುದು: ಎಚ್.ಎಂ. ರೇವಣ್ಣ

09:09 PM Sep 24, 2023 | Team Udayavani |

ದಾವಣಗೆರೆ: ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅ.3 ರಂದು ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಶನಲ್ ಸಂಸ್ಥೆಯ 9ನೇ ವಾರ್ಷಿಕ ರಾಷ್ಟ್ರೀಯ ಪ್ರತಿನಿಧಿಗಳ ಮಹಾ ಸಮಾವೇಶ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರೀಯ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಶನಲ್ ಸಂಸ್ಥೆ ರಾಷ್ಟ್ರೀಯ ಉಪಾಧ್ಯಕ್ಷ, ಮಾಜಿ ಸಚಿವ ಎಚ್.ಎಂ. ರೇವಣ್ಣ ತಿಳಿಸಿದರು.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ವಿವಿಧೆಡೆಯ ಕುರುಬ ಸಮುದಾಯವನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇಡೀ ದೇಶದಲ್ಲೇ ಕುರುಬ ಸಮಾಜದ ಏಕೈಕ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರಿಗೆ ರಾಷ್ಟ್ರೀಯ ಸನ್ಮಾನ ಮಾಡಲಾಗುವುದು ಎಂದರು.

ದಾವಣಗೆರೆಯಲ್ಲಿ2022 ರ ಆ. 3 ರಂದು ಸಿದ್ದರಾಮಯ್ಯ ಅವರ 75 ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಕುರುಬ ಸಮಾಜ ಸಂಘಟನೆಯಾಗಿದೆ. ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದ್ದು, ದೇಶದ ಗಮನ ಸೆಳೆದಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿರುವ ಕುರುಬರನ್ನು ಸಂಘಟಿಸುವ ಉದ್ದೇಶದಿಂದ ಎ.ಎಚ್. ವಿಶ್ವನಾಥ್ 2014 ರಲ್ಲಿ ಸಂಸದರಾಗಿದ್ದಾಗ ರಾಷ್ಟ್ರದ ವಿವಿಧ ಭಾಗಗಳಲ್ಲಿರುವ ಕುರುಬರನ್ನು ಸಂಘಟಿಸುವ ಉದ್ದೇಶದಿಂದ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಶನಲ್ ಸಂಸ್ಥೆ ಕೆಲಸ ಮಾಡುತ್ತಿದೆ ಎಂದರು.

2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಕುರುಬ ಸಮಾಜದವರಿಗೆ ಟಿಕೆಟ್‌ಗೆ ಒತ್ತಾಯ ಮಾಡುತ್ತಿದ್ದೇವೆ. ಎಲ್ಲರ ಆಶಯವೂ ಆಗಿದೆ. ಕುರುಬ ಸಮಾಜವನ್ನ ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಅದನ್ನು ಅಂಗೀಕರಿಸುವಂತೆ ಬೆಳಗಾವಿ ಸಮಾವೇಶ ದಲ್ಲಿ ಕೇಂದ್ರದ ಮೇಲೆ ಒತ್ತಡ ಹಾಕಲಾಗುವುದು ಎಂದು ತಿಳಿಸಿದರು.

ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಸಂಸ್ಥೆ ಪಕ್ಷಾತೀತವಾಗಿ ನಡೆಯುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಕೆ.ಎಸ್. ಈಶ್ವರಪ್ಪ ಹಾಗೂ ಜೆಡಿಎಸ್‌ನಲ್ಲಿ ಬಂಡೆಪ್ಪ ಕಾಶೆಂಪೂರ್ ಸಮಾಜವನ್ನು ಸಂಘಟಿಸುತ್ತಿದ್ದಾರೆ. ಸಮಾಜ ಸಂಘಟನೆಯ ಉದ್ದೇಶದಿಂದ ಕಾರ್ಯಕ್ರಮ ನಡೆಸಲಾಗುತ್ತಿದೆ. 20 ಜಿಲ್ಲೆಗಳಲ್ಲಿ ಈಗಾಗಲೇ ಪ್ರವಾಸ ಮಾಡಲಾಗಿದೆ. ಸೋಮವಾರ ಮೈಸೂರು ಭಾಗದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ತಿಳಿಸಿದರು.

Advertisement

ದಾವಣಗೆರೆಯಲ್ಲಿ ನಡೆದ ಸಭೆ ಯಶಸ್ಸು ಕಂಡಿವೆ. ಕಾರ್ಯಕ್ರಮ ಪಕ್ಷಾತೀತವಾಗಿದ್ದು, ವಿವಿಧ ರಾಜ್ಯಗಳ ಜನಪ್ರತಿನಿಧಿಗಳು ಬೆಳಗಾವಿಗೆ ಬರುತ್ತಿದ್ದಾರೆ ಎಂದು ತಿಳಿಸಿದರು.

Luck ಇದ್ದರೆ ಸಿದ್ದರಾಮಯ್ಯ ಪ್ರಧಾನಿಯಾಗಬಹುದು : ಎಚ್.ಎಂ. ರೇವಣ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡಿದ್ದಾರೆ. ಅದೃಷ್ಟ ಇದ್ದರೆ ಅವರು ಪ್ರಧಾನಿಯೂ ಆಗಬಹುದು. ಇಡೀ ಭಾರತದ ಕುರುಬ ಸಮಾಜ ಅವರನ್ನು ಇಷ್ಟಪಡುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಮಾಜಿ ಸಚಿವ ಎಚ್.ಎಂ. ರೇವಣ್ಣ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next