Advertisement

ಅಮಾನವೀಯ ನುಡಿಗೆ ಜನರಿಂದ ಶಾಪ:ಬಳ್ಳಾರಿ ಗೆಲುವಿನ ಬಳಿಕ ಸಿದ್ದು

11:10 AM Nov 06, 2018 | |

ಬಳ್ಳಾರಿ: ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌.ಉಗ್ರಪ್ಪ  ಅವರ ಭರ್ಜರಿ ಗೆಲುವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಂಭ್ರಮಿಸಿದ್ದು , ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಟ್ವೀಟ್‌ಗಳ ಮೂಲಕ ಸೋಲಿನ ಗಾಯದ ಮೇಲೆ ಬರೆ ಎಳೆದಿದ್ದಾರೆ.

Advertisement

ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ. ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ.ನಾಡಬಾಂಧವರಿಗೆ ದೀಪಾವಳಿಯ ಶುಭಾಶಯಗಳು ಎಂದು ಮೊದಲ ಟ್ವೀಟ್‌ ಮಾಡಿದ್ದಾರೆ.

2 ನೇ ಟ್ವೀಟ್‌ನಲ್ಲಿ ಬಳ್ಳಾರಿಯ ಜನತಾ ಜನಾರ್ದನರಿಗೆ ಧನ್ಯವಾದಗಳು. ಜನಾರ್ದನ ರೆಡ್ಡಿಯವರ ಅಮಾನವೀಯ ನಡೆ ನುಡಿಗೆ ಬಳ್ಳಾರಿ ಜನರೇ ಶಾಪ ನೀಡಿದ್ದಾರೆ. ಎಂದು ಟ್ವೀಟ್‌ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಮಾಡಿದ ಪಾಪದಿಂದಾಗಿ ಅವರ ಪುತ್ರ ಸಾವನ್ನಪ್ಪಿದ್ದು ಎನ್ನುವ ಮೂಲಕ ಜನಾರ್ದನ ರೆಡ್ಡಿ ಅವರು ಹೇಳಿಕೆ ನೀಡುವ ಮೂಲಕ ಪಕ್ಷಾತೀತವಾಗಿ ವಿರೋಧಕ್ಕೆ ಗುರಿಯಾಗಿದ್ದರು.

ಜಮಖಂಡಿ ಗೆಲುವಿಗೆ ಆನಂದ 
ಜಮಖಂಡಿ ವಿಧಾನಸಭಾ ಉಪಚುನಾವಣೆಯಲ್ಲಿ ಜಯಗಳಿಸಿರುವ ಆನಂದ ನ್ಯಾಮಗೌಡ ಅವರಿಗೆ ಅಭಿನಂದನೆಗಳು. ಪಕ್ಷದ ಜಯಕ್ಕಾಗಿ ಶ್ರಮಿಸಿದ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು. ನಮ್ಮ ಅಭ್ಯರ್ಥಿಯನ್ನು ಆಶೀರ್ವದಿಸಿದ ಕ್ಷೇತ್ರದ ಮತದಾರರಿಗೆ ಕೃತಜ್ಞತೆಗಳು. ಎಂದು ಟ್ವೀಟ್‌ ಮಾಡಿದ್ದಾರೆ. 
 

Advertisement
Advertisement

Udayavani is now on Telegram. Click here to join our channel and stay updated with the latest news.

Next