Advertisement

ಸಿಎಂ ಯಡಿಯೂರಪ್ಪ ಗೆ ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆ!

09:08 AM Feb 04, 2021 | Team Udayavani |

ವಿಧಾನಸಭೆ: ಅಕ್ರಮ ಡಿನೋಟಿಫಿಕೇಶನ್‌ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗಣಿ ಸಚಿವ ಮುರುಗೇಶ್‌ ನಿರಾಣಿ ವಿರುದ್ಧ ಆರೋಪ ಇದೆ. ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅಧಿಕಾರದಲ್ಲಿ ಇರಬೇಕಾ ಎಂದು ಜನರು ಪ್ರಶ್ನಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಮಾತನಾಡಿ, ತಮ್ಮ ವಿರುದ್ಧದ ಪ್ರಕರಣವನ್ನು ವಜಾಗೊಳಿಸುವಂತೆ ಸಿಎಂ ಯಡಿಯೂರಪ್ಪ ಹಾಗೂ ಸಚಿವ ನಿರಾಣಿ ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಆದರೆ, ಸುಪ್ರೀಂ ಕೋರ್ಟ್‌ ಪ್ರಕರಣ ವಜಾ ಮಾಡಲು ನಿರಾಕರಿಸಿದ್ದು, ಬಂಧನ ಮಾಡದಂತೆ ಸೂಚನೆ ನೀಡಿದೆ. ಇದು ಒಂದು ರೀತಿ ಬೇಲ್‌ ನೀಡಿದಂತೆ ಆಗಿದೆ ಎಂದು ಹೇಳಿದರು.

ಇದನ್ನೂ ಓದಿ: ಸಿನಿಮಾ ಮಂದಿ ಒಕ್ಕೊರಲ ಪ್ರಶ್ನೆಗೆ ಮಣಿದ ಸರ್ಕಾರ: ಉದಯವಾಣಿ ವರದಿಗೆ ಎಲ್ಲೆಡೆಯಿಂದ ಸ್ಪಂದನೆ

ಈ ಸಂದರ್ಭ ಮಧ್ಯಪ್ರವೇಶಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ಈ ಪ್ರಕರಣ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಚರ್ಚೆ ಮಾಡುವುದು ಸರಿಯಲ್ಲ. ಈ ವಿಷಯದ ಮೇಲೆ ಚರ್ಚೆಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next