ಮೈಸೂರು: ನಂಜನಗೂಡುನ ಐತಿಹಾಸಿಕ ಹಿಂದೂ ದೇವಸ್ಥಾನ ನೆಲಸಮ ಗೊಳಿಸಿರುವ ಕ್ರಮವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ದೇವಸ್ಥಾನ ನೆಲಕ್ಕುರುಳಿಸುತ್ತಿರುವ ವಿಡಿಯೋ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಸ್ಥಳೀಯ ಜನರ ಜೊತೆ ಸಮಾಲೋಚನೆ ನಡೆಸದೆ ದೇವಸ್ಥಾನವನ್ನು ಕೆಡವಲಾಗಿದೆ. ಈ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದೆ ಎಂದು ಟೀಕಿಸಿದ್ದಾರೆ.
ದೇವಸ್ಥಾನ ತೆರವು ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಸರಿಯಾದ ಕ್ರಮವನ್ನು ಅನುಸರಿಸಿಲ್ಲ ಎಂದು ಆರೋಪಿಸಿರುವ ಸಿದ್ದರಾಮಯ್ಯ, ಒಂದು ವೇಳೆ ದೇವಸ್ಥಾನವನ್ನು ತೆರವುಗೊಳಿಸುವುದು ಅನಿವಾರ್ಯವಾಗಿದ್ದರೆ ಅದಕ್ಕೆ ಪರ್ಯಾಯ ಸ್ಥಳವನ್ನು ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ.
Related Articles
ಇನ್ನು ದೇವಸ್ಥಾನ ತೆರವುಗೊಳಿಸಿದ್ದಕ್ಕೆ ರಾಜ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯನವರು, ಬಿಜೆಪಿ ಸರ್ಕಾರವು ಹಿಂದೂ ಧಾರ್ಮಿಕ ಭಾವನೆಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆ. ಶೀಘ್ರವೆ ದೇವಸ್ಥಾನ ಮರುಸ್ಥಾಪನೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.