Advertisement
ಈ ಹಿಂದೆ ಸಿದ್ದರಾಮಯ್ಯ ಪ್ರತ್ಯೇಕ ಪ್ರವಾಸ ಕೈಗೊ ಳ್ಳುವ ಯೋಜನೆ ಇತ್ತಾದರೂ ಅದರಿಂದ ಬೇರೆ ಸಂದೇಶ ರವಾನೆಯಾಗಬಹುದು ಎಂಬ ಕಾರಣಕ್ಕೆ ಇಬ್ಬರೂ ತಂಡಗಳಲ್ಲಿ ಪ್ರವಾಸ ಮಾಡುವಂತೆ ಹೈಕಮಾಂಡ್ ಸಲಹೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
Related Articles
ಈ ಮಧ್ಯೆ, ಕಾಂಗ್ರೆಸ್‌ನಿಂದ ದೂರವಾಗಿರುವ ಮತ ಬ್ಯಾಂಕನ್ನು ಮತ್ತೆ ಸೆಳೆಯಲು ಕಾರ್ಯತಂತ್ರ ರೂಪಿಸು ವಂತೆ ರಾಜ್ಯ ನಾಯಕರಿಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. 2013 ಹಾಗೂ 2018ರ ವಿಧಾನಸಭೆ, 2014 ಮತ್ತು 2019ರ ಲೋಕಸಭೆ ಚುನಾವಣೆಯ ಮತ ಗಳಿಕೆ ಪ್ರಮಾಣದ ಆಧಾರದಲ್ಲಿ ದಲಿತರು ಹಾಗೂ ಹಿಂದುಳಿದ ವರ್ಗ ಕಾಂಗ್ರೆಸ್‌ನಿಂದ ದೂರವಾಗಿದ್ದು, ಪಕ್ಷ ಹೆಚ್ಚು ಸ್ಥಾನ ಗೆಲ್ಲದಿರಲು ಇದು ಕಾರಣ ಎನ್ನಲಾಗಿದೆ.
Advertisement
ಹೀಗಾಗಿ ಪಕ್ಷದ ಸಾಂಪ್ರದಾಯಿಕ ಮತಬ್ಯಾಂಕನ್ನು ಮತ್ತೆ ಸೆಳೆಯಲು ಮಲ್ಲಿಕಾರ್ಜುನ ಖರ್ಗೆ ಮಾರ್ಗ ದರ್ಶನದಲ್ಲಿ ಕಾರ್ಯಕ್ರಮ ರೂಪಿಸಲು ರಾಹುಲ್ “ಟಾಸ್ಕ್’ ನೀಡಿದ್ದಾರೆ ಎಂದು ಹೇಳಲಾಗಿದೆ. ಆಯಾ ಸಮುದಾಯದ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸಿ ಪ್ರಮುಖರಿಗೆ ಆಹ್ವಾನ ನೀಡಿ ಸಂವಾದ ನಡೆಸಿ, ಕಾಂಗ್ರೆಸ್ ಮೇಲೆ ವಿಶ್ವಾಸ, ಭರವಸೆ ಮೂಡುವಂತೆ ಮಾಡಿ. ಏನಾ ದರೂ ತಪ್ಪಾಗಿದ್ದರೆ ಸರಿಪಡಿಸಿಕೊಳ್ಳಿ. ಆದರೆ ವೈಯಕ್ತಿಕ ಪ್ರತಿಷ್ಠೆಯಿಂದ ಪಕ್ಷಕ್ಕೆ ಹಾನಿ ಆಗುವಂತೆ ಮಾಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.
ರಾಹುಲ್ ಖುಷ್ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆಗೆ ಸಿಗುತ್ತಿರುವ ಸ್ಪಂದನೆಯಿಂದ ರಾಹುಲ್ ಖುಷಿಯಾಗಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕು. ಬಣ ರಾಜಕೀಯಕ್ಕೆ ಅವಕಾಶ ನೀಡಬಾರದು. ಚುನಾವಣೆ ಸಮಯದಲ್ಲಿ ಇದು ಬಿಜೆಪಿ ಹಾಗೂ ಜೆಡಿಎಸ್‌ಗೆ ಆಹಾರವಾಗುತ್ತದೆ. ಇದರಿಂದ ಪಕ್ಷಕ್ಕೆ ಹಾನಿ ಆಗಲಿದ್ದು, ಚುನಾವಣೆ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ ತಮ್ಮ ಬೆಂಬಲಿಗರು ಅನವಶ್ಯಕ ಹಾಗೂ ವಿವಾದಾತ್ಮಕ ಹೇಳಿಕೆ ನೀಡದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ನಾಯಕರಿಗೆ ತಾಕೀತು ಮಾಡಿದ್ದಾರೆ ಎಂದು ಹೇಳಲಾಗಿದೆ. - ಎಸ್. ಲಕ್ಷ್ಮೀನಾರಾಯಣ