Advertisement

ಶ್ರಮಿಕ ವರ್ಗಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆಗೆ ಸಿದ್ದರಾಮಯ್ಯ ಆಗ್ರಹ

02:14 AM Apr 29, 2020 | Sriram |

ಬೆಂಗಳೂರು: ಲಾಕ್‌ಡೌನ್‌ನಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಶ್ರಮಿಕ ವರ್ಗದವರಿಗಾಗಿ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

Advertisement

ಸಾಂಪ್ರದಾಯಿಕ ವೃತ್ತಿ ಮಾಡುವ ವಿವಿಧ ಸಮುದಾಯಗಳು ಮತ್ತು ಆಟೋ, ಟ್ಯಾಕ್ಸಿ ಸಹಿತ ನಾನಾ ಸಾರಿಗೆ ಸಂಘಟನೆಗಳ ಮುಖಂಡರ ಜತೆ ಮಂಗಳವಾರ ಸಭೆ ನಡೆಸಿದ ಸಿದ್ದರಾಮಯ್ಯ ಅವರು, ಲಾಕ್‌ಡೌನ್‌ನಿಂದಾಗಿ ಈ ವರ್ಗದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸುದೀರ್ಘ‌ವಾಗಿ ಚರ್ಚೆ ನಡೆಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸರಕಾರ ಈಗ ವಿತರಣೆ ಮಾಡುತ್ತಿರುವ ಆಹಾರ ಧಾನ್ಯದ ಕಿಟ್‌ಗಳು ಎಲ್ಲರನ್ನೂ ತಲುಪುತ್ತಿಲ್ಲ. ಅದಕ್ಕಾಗಿಯೇ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಲಾಕ್‌ಡೌನ್‌ ಮುಗಿದ ಬಳಿಕ ಎದುರಾಗಬಹುದಾದ ಸನ್ನಿವೇಶ ಕುರಿತು ಸಭೆಯಲ್ಲಿ ಎಲ್ಲರೂ ಆತಂಕ ವ್ಯಕ್ತಪಡಿಸಿದ್ದಾರೆ. ಎಲ್ಲರೂ ಲಿಖೀತ ರೂಪದಲ್ಲಿ ಸಮಸ್ಯೆಗಳನ್ನು ವಿವರಿಸಿ ದ್ದಾರೆ. ರಸ್ತೆ ತೆರಿಗೆ, ಮಾಸಿಕ ಕಂತು, ವಿಮೆ ಕಂತು, ವಿಮಾಣ ನಿಲ್ದಾಣದಲ್ಲಿ ಪಾರ್ಕಿಂಗ್‌ ಶುಲ್ಕ ಮನ್ನಾ ಮಾಡಬೇಕು ಎಂದು ಟ್ಯಾಕ್ಸಿ ಚಾಲಕರು, ಮಾಲಕರು ಹೇಳಿದ್ದಾರೆ. ಎಲ್ಲ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಸಿಎಂಗೆ ಪತ್ರ ಬರೆ ಯುತ್ತೇನೆ ಎಂದರು.

ಮದ್ಯದಂಗಡಿ ತೆರೆಯಲು ಒತ್ತಾಯ
ರಾಜ್ಯದಲ್ಲಿ ಅರ್ಥಿಕ ಸಮಸ್ಯೆ ಇದೆ. ಅಬಕಾರಿ ಸುಂಕ ಬಂದರೆ ರಾಜ್ಯದ ಆರ್ಥಿಕತೆ ಸ್ವಲ್ಪ ಮಟಿxಗಾದರೂ ಸುಧಾರಿಸುತ್ತದೆ. ಹಸುರು ವಲಯದಲ್ಲಿ ಸರಕಾರ ಮದ್ಯದ ಅಂಗಡಿಗಳನ್ನು ಪ್ರಾರಂಭ ಮಾಡಿದರೆ ಒಳ್ಳೆಯದು. ಮಾರಾಟಗಾರರಿಗೆ ಸಮಯ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಷರತ್ತು ಹಾಕಿ ಮದ್ಯದ ಅಂಗಡಿಗಳನ್ನು ತೆರೆದರೆ ರಾಜ್ಯದ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

Advertisement

ವಿಪಕ್ಷ ನಾಯಕರ ಸಭೆ
ಲಾಕ್‌ಡೌನ್‌ನಿಂದ ರೈತರು, ಕಾರ್ಮಿಕರು, ಮಧ್ಯಮ ವರ್ಗದವರು, ಶ್ರಮಿಕ ವರ್ಗದವರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಚರ್ಚಿಸಲು ಗುರುವಾರ ವಿಪಕ್ಷಗಳ ನಾಯಕರ ಸಭೆ ಕರೆದಿದ್ದೇನೆ. ಜೆಡಿಎಸ್‌, ಜೆಡಿಯು, ಸಿಪಿಐ, ಸಿಪಿಐಎಂ, ಬಿಎಸ್‌ಪಿ, ರೈತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next