ಬೆಂಗಳೂರು: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗಿದ್ದಾರೆ.
ಸಿದ್ದರಾಮಯ್ಯನವರಿಗೆ ಎರಡನೇ ಬಾರಿಗೆ ನಡೆದ ಕೋವಿಡ್ ಪರೀಕ್ಷೆಯಲ್ಲೂ ನೆಗೆಟಿವ್ ಬಂದಿದ್ದು ಅವರನ್ನು ಆಸ್ಪತ್ತೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಸಿದ್ದರಾಮಯ್ಯ ಅವರು ಮೂತ್ರದ ಸೋಂಕಿನ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಕಳೆದ ಹತ್ತು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇಂದು ಬಿಡುಗಡೆಯಾಗಿದ್ದಾರೆ. ಇಷ್ಟು ನೀಡಿದ ವೈದ್ಯರು, ಸಿಬ್ಬಂದಿಗೆ ಸಿದ್ದರಾಮಯ್ಯ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಮನೆಯಲ್ಲಿ ಒಂದು ವಾರ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವರದಿಯಾಗಿದೆ.