Advertisement

ಕಷ್ಟದ ಸ್ಥಿತಿಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿ ರಾಜಕೀಯ ಮಾಡುತ್ತಿರುವುದು ಸರಿಯಲ್ಲ :ಶೆಟ್ಟರ್

03:38 PM May 31, 2021 | Team Udayavani |

ಹುಬ್ಬಳ್ಳಿ: ಕೋವಿಡ್ ಸಂಕಷ್ಟ ಸ್ಥಿತಿಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ನಿರಂತರವಾಗಿ ಶ್ರಮಿಸುತ್ತಿದೆ. ವಿಪಕ್ಷ ನಾಯಕರು ಸಲಹೆ, ಸೂಚನೆಗಳನ್ನು ನೀಡಬೇಕು. ಅದನ್ನು ಬಿಟ್ಟು ದಿನಂಪೂರ್ತಿ ಟೀಕೆ ಮಾಡುವುದು ಸರಿಯಲ್ಲ. ಹೀಗಾಗಿಯೇ ಕಾಂಗ್ರೆಸ್ ಅವನತಿಗೆ ಕಾರಣವಾಗಿದೆ ಎಂದರು.

ಕಾಂಗ್ರೆಸ್ ನವರು ಸರ್ಕಾರಕ್ಕೆ 100 ಕೋಟಿ ರೂ.ವನ್ನು ತಮ್ಮ ಸ್ವಂತ ಹಣ ಕೊಟ್ಟಿಲ್ಲ. ಸುಮ್ಮನೆ ಪ್ರಚಾರಕ್ಕೆ ಇಲ್ಲಸಲ್ಲದನ್ನು ಮಾಡುವುದು ಸರಿಯಲ್ಲ. ಸಂದಿಗ್ಧ ಸಮಯದಲ್ಲಿ ಒಳ್ಳೆಯ ಪ್ರತಿಪ್ರಕ್ಷವಾಗಿ ರಚನಾತ್ಮಕ ಸಲಹೆ,ಕೆಲಸಕ್ಕೆ ಮುಂದಾಗಲಿ ಎಂದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಯತ್ನ ನಡೆದಿಲ್ಲ. ಈ ವರೆಗೆ ಈ ಕುರಿತು ರಾಷ್ಟ್ರ, ರಾಜ್ಯ ನಾಯಕರ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ಎರಡು ವರ್ಷ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುವುದು ಖಚಿತ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next