Advertisement

ಹೈಕಮಾಂಡ್ ನಿಂದ ವಿಧಾನಸಭೆ ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಅಧಿಕೃತ ಆಯ್ಕೆ

10:16 AM Oct 11, 2019 | Team Udayavani |

ಬೆಂಗಳೂರು ; ವಿರೋಧ ಪಕ್ಷದ ನಾಯಕರನ್ನಾಗಿ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ. ಇದರ ಜೊತೆಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ಎಸ್.ಆರ್.ಪಾಟೀಲ್ ಅವರನ್ನು ನೇಮಕ ಮಾಡಲಾಯಿತು.

Advertisement

ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಕೆ ಸಿ ವೇಣುಗೋಪಾಲ್ ಘೋಷಣೆಯನ್ನು ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕರಾಗಿ ಆಯ್ಕೆಗೊಂಡ ಸಿದ್ದರಾಮಯ್ಯ ಮಾಧ್ಯಮದೊಂದಿಗೆ ಮಾತನಾಡುತ್ತಾ, ವಿಪಕ್ಷ ನಾಯಕ ಕೊಟ್ಟ ಹೈಕಮಾಂಡ್ ಗೆ ಧನ್ಯವಾದ ತಿಳಿಸುತ್ತೇನೆ.. ಸೋನಿಯಾ ಗಾಂಧಿಯವರು ನನ್ನ ಮೇಲೆ ವಿಶ್ವಾಸ ಇಟ್ಟು ಈ ಸ್ಥಾನ ಕೊಟ್ಟಿದ್ದಾರೆ, ಅವರ ನಂಬಿಕೆಗೆ ಚ್ಯುತಿ ಬಾರದ ರೀತಿ ನಡೆದುಕೊಳ್ಳುತ್ತೇನೆ , ಕೋಮುವಾದಿ ಪಕ್ಷದ ವಿರುದ್ಧ ಕಾಂಗ್ರೆಸ್ ಬಲ ಪಡಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಕಾಂಗ್ರೇಸ್ ಹೈಕಮಾಂಡ್ ನನ್ನನ್ನು ವಿಪಕ್ಷ ನಾಯಕ ಮಾಡಿದ್ರು , ಸಿಎಂ ಮಾಡಿದ್ರು ಈಗ ಮತ್ತೆ ವಿಪಕ್ಷ ನಾಯಕ ಮಾಡಿದ್ದಾರೆ. 2013 ರ ರೀತಿಯಲ್ಲಿ ಪಕ್ಷ ಕಟ್ಟಿ ಮತ್ತೆ ಅಧಿಕಾರಕ್ಕೆ ತರುವ ಎಲ್ಲಾ ಪ್ರಯತ್ನ ಮಾಡುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next