Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು, ಮುಂದಿನ ವರ್ಷ ಲೋಕಸಭೆ ಚುನಾವಣೆ ಇರುವು ದರಿಂದ ಪಕ್ಷವನ್ನುಸಂಘಟಿಸಲು ಎಲ್ಲ ಸಮುದಾಯಗಳನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಪ್ರಬಲ ನಾಯಕ ಕೆಪಿಸಿಸಿ
ಅಧ್ಯಕ್ಷರಾಗಬೇಕು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರುವುದರಿಂದ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಮೈತ್ರಿ ಕೂಟ ಬಲಗೊಳ್ಳಬೇಕೆಂದರೆ, ರಾಜ್ಯದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಬೇಕಿದೆ.
ಮುನಿಯಪ್ಪ, ಬಿ.ಕೆ.ಹರಿಪ್ರಸಾದ್, ಡಿ.ಕೆ.ಶಿವಕುಮಾರ್ ಅವರಲ್ಲಿ ಒಬ್ಬರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದರು. ದಿನೇಶ್ ಗುಂಡೂರಾವ್ ಹೆಸರು ಕೇಳಿ ಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ದಿನೇಶ್ ಗುಂಡೂವಾರ್
ಅಸಮರ್ಥರಲ್ಲ. ಆದರೆ, ಚುನಾವಣೆ ಸಂದರ್ಭದಲ್ಲಿ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಹಿರಿಯರಿಗೆ
ಆದ್ಯತೆ ನೀಡಬೇಕೆಂದು ತಿಳಿಸಿದರು. ಪಕ್ಷದ ಅಧ್ಯಕ್ಷರ ಆಯ್ಕೆಯಲ್ಲಿ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಎಂಬ
ಪ್ರಶ್ನೆ ಬರುವುದಿಲ್ಲ ಎಂದರು.