Advertisement
ಚಾಮುಂಡೇಶ್ವರಿ ಜತೆಗೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲು ಹೈಕಮಾಂಡ್ ಅನುಮತಿ ದೊರೆತಿದ್ದು, ಶನಿವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜತೆ ಚರ್ಚಿಸಿ ಒಪ್ಪಿಗೆ ನೀಡಿದ್ದಾರೆ. ಆದರೆ ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಎಂಬ ಸಂದೇಶ ರವಾನೆಯಾಗದಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
Related Articles
ಸಾಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ವಂಚಿತ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ಶನಿವಾರ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕೈ ಉಸ್ತುವಾರಿ ವೇಣುಗೋಪಾಲ್ ಜತೆ ಚರ್ಚಿಸಿ ಈ ತೀರ್ಮಾನಕ್ಕೆ ಬಂದಿದ್ದಾರೆ.
Advertisement
ಸೋಮಣ್ಣ ಪುತ್ರನಿಂದ ಟಿಕೆಟ್ ತ್ಯಾಗ?ಈ ನಡುವೆ ಅರಸೀಕೆರೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆದಿರುವ ಮಾಜಿ ಸಚಿವ ವಿ.ಸೋಮಣ್ಣ ಪುತ್ರ ಡಾ| ಅರುಣ್ ಸೋಮಣ್ಣ ಸ್ಪರ್ಧಿಸಲು ನಿರಾಕರಿಸುತ್ತಿದ್ದಾರೆ ಎನ್ನಲಾಗುತ್ತಿದ್ದು, ಇಲ್ಲಿ ಬಸವರಾಜ್‌ಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ವಿ. ಸೋಮಣ್ಣ ಅವರಿಗೆ ಗೋವಿಂದರಾಜನಗರ, ಅವರ ಕಟ್ಟಾ ಬೆಂಬಲಿಗ ರವೀಂದ್ರ ಅವರಿಗೆ ವಿಜಯ ನಗರ, ಲಕ್ಷ್ಮೀನಾರಾಯಣ ಅವರಿಗೆ ಚಾಮರಾಜಪೇಟೆ ಟಿಕೆಟ್ ದೊರೆತಿರುವುದರಿಂದ ಮೂರೂ ಕ್ಷೇತ್ರಗಳಲ್ಲಿ ಓಡಾಡಿ ಪಕ್ಷದ ಗೆಲುವಿಗೆ ಶ್ರಮಿಸಬೇಕೆಂಬ ಹಿನ್ನೆಲೆಯಲ್ಲಿ ಪುತ್ರ ಟಿಕೆಟ್ ತ್ಯಾಗ ಮಾಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಮಧುಗಿರಿಯ ಟಿಕೆಟ್ ಪಡೆದಿರುವ ಹುಲಿ ನಾಯ್ಕರ್ ಸಹ ಸ್ಪರ್ಧೆಗೆ ಹಿಂದೇಟು ಹಾಕಿ ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದಾರೆ. ಐದು ಕ್ಷೇತ್ರಗಳಿಗೆ ಕೈ ಟಿಕೆಟ್
ನಾಗಠಾಣ ಕ್ಷೇತ್ರದಲ್ಲಿ ಹಾಲಿ ಶಾಸಕ ರಾಜು ಅಲಗೂರು ಬದಲು ಬಿಜೆಪಿಯಿಂದ ವಲಸೆ ಬಂದ ಮಾಜಿ ಶಾಸಕ ವಿಠಲ್ ಕಟಕದೊಂಡ ಅವರಿಗೆ ಟಿಕೆಟ್ ನೀಡಲು ತೀರ್ಮಾನಿಸ ಲಾಗಿದೆ. ಅದೇ ರೀತಿ ರಾಯಚೂರು ಗ್ರಾಮೀಣ ಕ್ಷೇತ್ರದಿಂದ ಸಿ.ಕೆ.ಜಾಫರ್ ಷರೀಫ್ ಅಳಿಯ ಸೈಯದ್ ಯಾಸೀನ್, ಶಾಂತಿನಗರದಿಂದ ಹ್ಯಾರೀಸ್, ಕಿತ್ತೂರಿನಿಂದ ಹಾಲಿ ಶಾಸಕ ಡಿ.ಬಿ. ಇನಾಂದಾರ್, ಸಿಂಧಗಿಯಿಂದ ಶಾಣಪ್ಪ ಸುಣಗಾರ ಅವರಿಗೆ ಟಿಕೆಟ್ ನೀಡಲಾಗಿದೆ.