ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರ ಶಾಸಕಾಂಗ ಪಕ್ಷದ
ನಾಯಕ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕಾರಿ ಸಮತಿ (ಸಿಡಬ್ಲೂéಸಿ) ಸದಸ್ಯರಾಗಿರುವುರಿಂದ ಶಾಸಕಾಂಗ ಪಕ್ಷದ ಅಧ್ಯಕ್ಷ ಸ್ಥಾನ ಡಾ.ಜಿ.ಪರಮೇಶ್ವರ್ ಪಾಲಾಗಲಿದೆ ಎಂದು ಹೇಳಲಾಗಿದೆ.
ಮತ್ತೂಂದು ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆಸಿಕೊಳ್ಳುವ ಉದ್ದೇಶದಿಂದಲೇ ಸಿಡಬ್ಲೂéಸಿ ಸದಸ್ಯರನ್ನಾಗಿ ಮಾಡಲಾಗಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಅಥವಾ ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸುವ ಕುರಿತಂತೆಯೂ ಲೆಕ್ಕಾಚಾರಗಳು ಆರಂಭವಾಗಿವೆ ಎಂದು ಹೇಳಲಾಗಿದೆ. ಆದರೆ, ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ತೀರ್ಮಾನಿಸಿರುವ ಸಿದ್ದ ರಾಮಯ್ಯ, ಹೈಕಮಾಂಡ್ ಸೂಚಿಸಿದರೆ ಲೋಕಸಭೆ ಚುನಾವಣಾ ಕಣಕ್ಕಿಳಿಯುವರೇ
ಎಂಬ ಪ್ರಶ್ನೆಯೂ ಇದೆ. ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ನಡೆಯಲು ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕಳುಹಿಸಬೇಕು ಎಂಬುದು ಪರಮೇಶ್ವರ್ ಹಾಗೂ ಡಿ.ಕೆ. ಶಿವಕುಮಾರ್ ಅವರ ಲೆಕ್ಕಾಚಾರ ಎಂದು ಹೇಳಲಾಗಿದೆ.