Advertisement
ಭಾನುವಾರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದಲ್ಲಿ ಇಂಚಗೇರಿ ಮಠದ ಮಾಧವಾನಂದ ಪರಭುಗಳ ದೇವಾಲಯ, ಕಳಸಾರೋಹಣ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಅನಾವರಣ ಮಾಡಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಾವು ಯಾವುದೇ ಜಾತಿ ಧರ್ಮಗಳಿಗೆ ಸೀಮಿತಗೊಳಿಸಿಲ್ಲ. ಚುನಾವಣೆಯಲ್ಲಿ ನೀವು ಮತ ಹಾಕದಿದ್ದರೂ ಎಲ್ಲ ಸಮುದಾಯಗಳ ಜನರಿಗೆ ಗ್ಯಾರಂಟಿ ಯೋಜನೆ ನೀಡುತ್ತಿದ್ದೇವೆ ಎಂದರು.
Related Articles
Advertisement
ಇನ್ನಾದರೂ ಪರಸ್ಪರ ಮನುಷ್ಯರನ್ನು ಪ್ರೀತಿ ವಿಶ್ವಾಸದಿಂದ ಕಂಡು, ಗೌರವಿಸಿ, ಮನುಷ್ಯರಾಗಿ ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕಬೇಕು. ಬಹುತ್ವದ ಆಚರಣೆ ಹಾಗೂ ಅನುಕರಣೆಯಿಂದ ಮಾತ್ರ ಬಸವಾದಿ ಶರಣರು, ಮಾಧವಾನಂದ ಪ್ರಭುಗಳ ಕಂಡ ಜಾತಿ ರಹಿತ ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದರು.
ಸ್ವಾತಂತ್ರ್ಯ ಪೂರ್ವದಲ್ಲಿ ರಾಜ ಪ್ರಭುತ್ವಗಳ ಆಡಳಿತದಲ್ಲಿ ಭಾರತದಲ್ಲಿನ ಜಾತಿ ವ್ಯವಸ್ಥೆಯಂಥ ವರ್ಗ ವರ್ಣ ವ್ಯವಸ್ಥೆಯೇ ವ್ಯಾಪಾರಕ್ಕೆ ಬಂದ ಬ್ರಿಟೀಷರು ನಮ್ಮನ್ನು ನೂರಾರು ವರ್ಷ ಆಳುವಂತ ದುಸ್ಥಿತಿಗೆ ಕಾರಣವಾಗಿತ್ತು. ಆದರೆ ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರಂಥ ಅಪ್ರತಿಮ ಪರಾಕ್ರಮಿ ಸ್ವಾತಂತ್ರ್ಯ ಪ್ರೇಮಿಗಳು ಹೋರಾಟದ ಮೂಲಕ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದರು ಎಂದು ವಿಶ್ಲೇಷಿಸಿದರು.
ಜಿಲ್ಲಾ ಉಸ್ತುವಾರಿ ಹೊಂದಿರುವ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ, ಸಕ್ಕರೆ ಸಚಿವ ಶಿವಾನಂಧ ಪಾಟೀಲ, ಅಬಕಾರಿ ಸಚಿವ ಆರ್.ಬಿ.ತಮ್ಮಾಪುರ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಅಶೋಕ ಮನಗೂಳಿ, ಜೆ.ಟಿ.ಪಾಟೀಲ, ಸುನೀಲಗೌಡ ಪಾಟೀಲ, ಪ್ರಕಾಶ ರಾಠೋಡ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಶಾಸಕ ಪ್ರೊ.ರಾಜು ಆಲಗೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.