ಬೆಂಗಳೂರು: ಅಂತಾರಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ, ಬ್ಯಾರಲ್ ಗೆ 130 ರೂ ಡಾಲರ್ ಇದ್ದರೂ, ಇಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿದ್ದಾರೆ. ನನ್ನ ಪ್ರಕಾರ ಪೆಟ್ರೋಲ್ ಗೆ 25 ರೂ ಮಾಡಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸತತ ತೈಲ ದರ ಏರಿಕೆ ಮಾಡುತ್ತಿರುವ ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಇಂದು ಸೈಕಲ್ ಸವಾರಿ ಮಾಡಿದರು.
ಇದಕ್ಕೂ ಮೊದಲು ಮಾತನಾಡಿದ ಅವರು, ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಸಬ್ಸಿಡಿ ಕೊಟ್ಟಿತ್ತು. ಈಗ ಈ ಸರ್ಕಾರ ಯಾವುದೂ ಕೊಟ್ಟಿಲ್ಲ. ಸಾಮಾನ್ಯ ಜನರ ಮೇಲೆ ದುಬಾರಿ ಬೆಲೆ ಹಾಕ್ತಿದೆ ಎಂದರು.
ರೈತರಿಗೆ ಹಾಗೂ ಕೈಗಾರಿಕೆಗಳಿಗೆ ದುಬಾರಿಯಾಗಿದೆ. ಕೋವಿಡ್ -19 ಸೋಂಕು ಇದ್ದರೂ ಕಳೆದ 10 ದಿನಗಳಿಂದ 11 ರೂ ಹೆಚ್ಚಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರ ಬಡವರ ಮೇಲೆ ಬರೆ ಹಾಕಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕೋವಿಡ್-19 ಸೋಂಕು ನಿರ್ವಹಣೆಯಲ್ಲಿ ಸರ್ಕಾರ ವಿಫಲ ಆಗಿರುವುದರ ಬಗ್ಗೆಯೂ ಪ್ರತಿಭಟನೆ ಮಾಡ್ತೀವಿ ಎಂದು ಹೇಳಿದರು.
ಸೈಕಲ್ ರಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಅನೇಕ ಶಾಸಕರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.