ತುಮಕೂರು: ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಇನ್ನೊಬ್ಬ ಭಷ್ಟ ಮುಖ್ಯಮಂತ್ರಿ ಬರಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ತುಮಕೂರಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ವಿಭಾಗೀಯ ಮಟ್ಟದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾಗಿ ಇನ್ನೊಬ್ಬ ಭ್ರಷ್ಟ ಸಿಎಂ ಬರಲಿದ್ದಾರೆ. ಉತ್ತರ ಕರ್ನಾಟಕದಲ್ಲಿ ನೆರೆ ನಡುವೆಯೂ ಅಧಿಕಾರಕ್ಕಾಗಿ ಬಿಜೆಪಿ ಮುಖಂಡರು ಕಿತ್ತಾಡುತ್ತಿದ್ದಾರೆ. ಅವರು ನೆರೆಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅವರಿಗೆ ಅಧಿಕಾರ ಮುಖ್ಯ ಎಂದು ಕಿಡಿಕಾರಿದರು.
ಇದನ್ನೂ ಓದಿ:ಅಂಬೇಡ್ಕರ್ ಗೆ ಅತೀ ಹೆಚ್ಚು ಅವಮಾನ ಮಾಡಿದ್ದು ಕಾಂಗ್ರೆಸ್: ನಳಿನ್ ಕಟೀಲ್ ವಾಗ್ದಾಳಿ
ಸಭೆಯಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಧ್ರುವ ನಾರಾಯಣ, ಸಲೀಂ ಅಹಮದ್, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಉಪಸ್ಥಿತರಿದ್ದರು