Advertisement
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ವೈ ಸಿದ್ದರಾಮಯ್ಯ ಅವರು ಪ್ರಚಾರದ ಭರಾಟೆಯಲ್ಲಿ ಶ್ರೀರಾಮುಲು ಸೆಕ್ಷನ್ 420 ಅರ್ಥ ಮಾಡಿಕೊಂಡಿದ್ದಾರೆ ಎಂದು ನಾಲಿಗೆ ಹರಿಯ ಬಿಟ್ಟಿದ್ದಾರೆ. ಇದು ಅವರ ಘನತೆಗೆ ತಕ್ಕುದಲ್ಲ ಎಂದರು.
ಪ್ರಧಾನಿ ಅಭ್ಯರ್ಥಿ ಯಾರು ಎನ್ನುವ ಗೊಂದಲ ಕಾಂಗ್ರೆಸ್‌ನಲ್ಲಿದೆ.ಕೆಲವರು ರಾಹುಲ್ ಗಾಂಧಿ ಅಂದರೆ ಇನ್ನು ಕೆಲವರು ಚಿದಂಬರಂ ಅನ್ನುತ್ತಿದ್ದಾರೆ. ಆದರೆ ಎಲ್ಲಾ ಸಮೀಕ್ಷೆಗಳು ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿವೆ ಎಂದರು.