Advertisement
ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ಮೇಯರ್, ಉಪ ಮೇಯರ್ ಚುನಾವಣೆ ಸಂದರ್ಭ, ತಮ್ಮ ಮಾತು ಕೇಳಲಿಲ್ಲ ಎಂದು ನಾಲ್ಕು ದಿನ ಹೋಗಿ ರೆಸಾರ್ಟ್ ನಲ್ಲಿ ಕೂತಿದ್ದರು. ಸಿದ್ದರಾಮಯ್ಯ ಅವರಿಗೆ ಅನ್ಯಾಯವಾಗಿದೆ ಎಂದು ರಮೇಶ್ ಕುಮಾರ್ ಅವರೂ ಹೇಳಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರ ಸ್ಥಿತಿ ಹೇಗಿದೆ ಅಂದರೆ ತೊಟ್ಟಿಯಲ್ಲಿರುವ ಕಸದಂತಾಗಿದೆ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
Related Articles
Advertisement
ಬೆಂಗಳೂರಿಗೆ ಹೋಗಿ ಪಟ್ಟಿ ಕೊಡುತ್ತೇನೆ
ಅಧಿಕಾರಿಗಳು ಮಾತು ಕೇಳುತ್ತಿಲ್ಲ, ಸಚಿವರು ಮಾತು ಕೇಳುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಾಳೆಯೋ, ನಾಡಿದ್ದೋ ಬೆಂಗಳೂರಿಗೆ ಹೋಗುತ್ತೇನೆ. ಸ್ವಾತಂತ್ರ್ಯ ನಂತರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಏನೇನು ಆಗಿರಲಿಲ್ಲ, ಈಗ ಏನೇನು ಆಗಿದೆ ಅನ್ನುವದರ ಪಟ್ಟಿ ಕೊಡುತ್ತೇನೆ. ನಾವು, ನಮ್ಮ ಅಧಿಕಾರಿಗಳು ಏನೆಲ್ಲ ಕೆಲಸ ಮಾಡಿದ್ದೇವೆ ಎಂದು ತಿಳಿಸುತ್ತೇನೆ ಎಂದರು.
ಇದನ್ನೂ ಓದಿ: ಅಕ್ರಮ ಡಿನೋಟಿಫಿಕೇಶನ್ ಪ್ರಕರಣ: ಯಡಿಯೂರಪ್ಪ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ