Advertisement

ಹಿಂದೂ ವಿರೋಧಿ ಸಿದ್ದರಾಮಯ್ಯ ದೇವಸ್ಥಾನದ ಬದಲು ಮಸೀದಿ ಬಗ್ಗೆ ಮಾತಾಡುತ್ತಾರೆ: ಅರುಣ್ ಸಿಂಗ್

12:56 PM Sep 18, 2021 | Team Udayavani |

ದಾವಣಗೆರೆ: ಸಿದ್ದರಾಮಯ್ಯ ದೇವಸ್ಥಾನದ ಬದಲು ಮಸೀದಿ ಬಗ್ಗೆ ಮಾತಾಡುತ್ತಾರೆ.  ಬಿಜೆಪಿ ದೇವಸ್ಥಾನ ನಿರ್ಮಿಸುತ್ತದೆ. ದೇವಸ್ಥಾನ ಉಳಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಈಗ ದೇವಸ್ಥಾನಗಳ ಬಗ್ಗೆ ಮಾತಾಡುತ್ತಿದ್ದಾರೆ. ಅವರು ಮಸೀದಿಗಳ ಬಗ್ಗೆ ಹೆಚ್ಚು ಮಾತಾಡುತ್ತಾರೆ. ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದರು.

ಇದನ್ನೂ ಓದಿ:ಚುನಾವಣಾ ಪೂರ್ವ ಸಿದ್ಧತೆ : ಸಪ್ಟೆಂಬರ್ 20 ರಂದು ದೇವೇಂದ್ರ ಫಡ್ನವೀಸ್ ಗೋವಾಕ್ಕೆ

ಬಿಎಸ್ ವೈ ಪ್ರವಾಸಕ್ಕೆ ತಡೆಯಿಲ್ಲ: ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಆರಂಭಿಸಲು ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಹಿರಿಯ ನಾಯಕ ಅವರು ಪ್ರವಾಸ ಮಾಡಬಹುದು ಎಂದು ಅರುಣ್ ಸಿಂಗ್ ಹೇಳಿದರು.

ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಒಳ್ಳೆಯ ಕೆಲಸ ನಡೆಯುತ್ತಿದೆ. ಸಮಾಜದ ಎಲ್ಲ ಜನಾಂಗದ ಬಗ್ಗೆ ಗಮನ ಹರಿಸುತ್ತಿದ್ದಾರೆ. ಜನರಿಗೆ ಅನುಕೂಲ ಆಗುವ ಕೆಲಸ ಮಾಡುತ್ತಿದ್ದಾರೆ. ಎರಡು ದಿನಗಳ ದಾವಣಗೆರೆ ಸಭೆಯಲ್ಲಿ ಪಕ್ಷದ ವಿಚಾರ ಚಿಂತನೆ ನಡೆಯಲಿದೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next