Advertisement

ಬಿಜೆಪಿ ಕೇಂದ್ರ ನಾಯಕರ ಜೊತೆ ಸಿದ್ದರಾಮಯ್ಯ ನಂಟು: ಸಂಸದ ಪ್ರತಾಪ್ ಸಿಂಹ

04:33 PM Nov 10, 2020 | keerthan |

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರು ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರುವ ಬಗ್ಗೆ ಗುಮಾನಿ ಇದೆ ಎಂದು ಸಂಸದ ಪ್ರತಾಪಸಿಂಹ ಹೇಳಿದರು.

Advertisement

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪಸಿಂಹ, ನಮ್ಮ ಪಕ್ಷದ ನಮಗಿಂತ ಹೆಚ್ಚಾಗಿ ಸಿದ್ದರಾಮಯ್ಯಗೆ ಗೊತ್ತಾಗುತ್ತಿದೆ. ಸಿದ್ದರಾಮಯ್ಯ ಅವರಿಗೆ ಯಾವ ಮೂಲದಿಂದ ಇದು ಗೊತ್ತಾಗಿದೆ ಎಂದು ತಿಳಿದಿಲ್ಲ. ಬಹುಶಃ ಅವರು ನಮ್ಮ ಕೇಂದ್ರದ ನಾಯಕರ ಸಂಪರ್ಕ ಸಾಧಿಸಿರಬಹುದು. ಕಾಂಗ್ರೆಸ್‌ನಲ್ಲಿ ನನಗೆ ಉಳಿಗಾಲವಿಲ್ಲವೆಂದು ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರಬಹುದು. ಇದರಿಂದ ಅವರು ಈ ರೀತಿ ಹೇಳಿಕೆ ನೀಡುತ್ತಿರಬಹುದು. ಮುಂದಿನ ಎರಡುವರೇ ವರ್ಷ ಯಡಿಯೂರಪ್ಪ ಅವರೇ ಸಿಎಂ ಆಗಿರುತ್ತಾರೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಹಾಳಾದರೂ ಸರಿ ಡಿ.ಕೆ.ಶಿವಕುಮಾರ್‌ಗೆ ಯಾವುದೇ ಸ್ಥಾನ ಸಿಗಬಾರದು ಎಂಬುದು ಸಿದ್ದರಾಮಯ್ಯ ಉದ್ದೇಶ. ಅದೇ ಕಾರಣಕ್ಕೆ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲನ್ನು ಸಿದ್ದರಾಮಯ್ಯ ಬಯಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರೇ ಸಿಎಂ ಆಗುವುದು ಕಾಂಗ್ರೆಸ್ ಪರಂಪರೆ. ಇದು ಸಿದ್ದರಾಮಯ್ಯಗೆ ಗೊತ್ತಿದೆ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ. ಇದನ್ನು ತಪ್ಪಿಸಲು ಡಿಕೆಶಿ ಅವರನ್ನು ಚುನಾವಣೆಯಲ್ಲಿ ಸೋಲಿಸಬೇಕು. ಆದರೆ, ಪರಮೇಶ್ವರ್‌ ಅವರನ್ನು ಸೋಲಿಸಿದಂತೆ ಡಿಕೆಶಿ ಸೋಲಿಸಲು ಸಾಧ್ಯವಿಲ್ಲ. ಇದು ಸಿದ್ದರಾಮಯ್ಯ ಅವರಿಗೆ ಗೊತ್ತಿದೆ. ಹೀಗಾಗಿ, ಪಕ್ಷದ ಹಿನ್ನೆಡೆಗೆ ಅವರೇ ಕಾರಣರಾಗುತ್ತಿದ್ದಾರೆ ಎಂದು ಟೀಕಿಸಿದರು.

ಇದನ್ನೂ ಓದಿ:ಶಿರಾ’ದಲ್ಲಿ ‘ರಾರಾ’ಜಿಸಿದ ಕಮಲ: ಬಿಎಸ್ ವೈ ಮತ್ತಷ್ಟು ಭದ್ರ, ಕೈ ರಣತಂತ್ರ ಛಿದ್ರ

ಶಿರಾ ಮತ್ತು ಆರ್.ಆರ್.ನಗರ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆಗೆ ಅಧಿಕಾರ ದುರುಪಯೋಗ ಸಂಬಂಧ ಕಾಂಗ್ರೆಸ್‌ ಆರೋಪವನ್ನು ಅಲ್ಲೆಗಳೆದು ಮಾತನಾಡಿದ ಅವರು, ಕಾಂಗ್ರೆಸ್‌ ಸೋತಾಗ ಮಾತ್ರ ಅವರಿಗೆ ಇವಿಎಂ ನೆನಪಾಗುತ್ತದೆ. ಅವರು ಗೆದ್ದ ಕಡೆ ಈ ಬಗ್ಗೆ ಪ್ರಶ್ನೆ ಮಾಡುವುದಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಉಪಚುನಾವಣೆಯಲ್ಲಿ ಮಾಡಿದ್ದೇನು? ನಂಜನಗೂಡು ಚಾಮರಾಜನಗರ ಉಪಚುನಾವಣೆ ಹೇಗೆ ಗೆದ್ದರು? ಉಪಚುನಾವಣೆ ಹೇಗೆ ಮಾಡಬೇಕು ಅಂತಾ ಮೇಲ್ಪಂಕ್ತಿಯನ್ನು ಹಾಕಿಕೊಟ್ಟವರೇ ಕಾಂಗ್ರೆಸ್‌ನವರು. ಉಪಚುನಾವಣೆಯಲ್ಲಿ ಎಲ್ಲ ಬಲಗಳು ಬಳಕೆಯಾಗುವುದು ಸಹಜ ಎಂದು ತಿರುಗೇಟು ನೀಡಿದರು.

Advertisement

ಎರಡು ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲುತ್ತಿದ್ದೇವೆ. ಶಿರಾ ವಿಚಾರ 70 ವರ್ಷದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಈಗ ಸಂಘಟಿತರಾಗಿ ಹೋರಾಟ ಮಾಡಿದ್ದಕ್ಕೆ ಗೆಲುವು ಸಾಧ್ಯವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು

Advertisement

Udayavani is now on Telegram. Click here to join our channel and stay updated with the latest news.

Next