ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪತನಕ್ಕೆ ಸಿದ್ದರಾಮಯ್ಯ ಕಾರಣವಲ್ಲ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಜಿಲ್ಲೆಯ ಚಿಂತಾಮಣಿಯಲ್ಲಿ ಭಾನುವಾರ ಕಾಂಗ್ರೆಸ್ ಮುಖಂಡರಾದ ರಾಯಲ್ ರಾಮಕೃಷ್ಣರೆಡ್ಡಿ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ತಮ್ಮನ್ನುಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರು ಒಂದಾಗಿ ಕೆಲಸ ಮಾಡಿದರೂ ಸ್ಥಳಿಯ ಮಟ್ಟದಲ್ಲಿ ಎರಡು ಪಕ್ಷಗಳ ಕಾರ್ಯಕರ್ತರು ಒಂದಾಗಲಿಲ್ಲ ಎಂದರು. ಈಗ ಆರೋಪ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದರು. ಅರ್ನಹ ಶಾಸಕರ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ತೀರ್ಪು ಏನು ಬರುತ್ತೆದೆ ಎಂಬುದನ್ನು ಕಾದು ನೋಡಬೇಕಿದೆ. ಆದ್ದರಿಂದ ಉಪ ಚುನಾವಣೆ ಬಗ್ಗೆ ಈಗಲೇ ಏನು ಹೇಳಲ್ಲ. ಒಂದು ಉಪ ಚುನಾವಣೆಯಲ್ಲಿ ಎರಡು ಪಕ್ಷಗಳ ಮೈತ್ರಿ ಬಗ್ಗೆ ಪಕ್ಷದ ವರಿಷ್ಠರು ತಿರ್ಮಾನ ತೆಗೆದುಕೊಳ್ಳುತ್ತಾರೆಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ವಿರೋಧ ಪಕ್ಷದ ನಾಯಕನ ಆಯ್ಕೆಯನ್ನು ಪಕ್ಷದ ಶಾಸಕರು ಆರಿಸುತ್ತಾರೆಂದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಸ್ತಾನಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಲಾಭಿ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪಕ್ಷದ ವರಿಷ್ಟರು ಆ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆಂದರು.