Advertisement

ಸಿದ್ದರಾಮಯ್ಯ ಭೇಟಿ ಮಾಡಿದ ಎಚ್‌ಡಿಕೆ

01:22 AM May 27, 2019 | Sriram |

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿ ಮಾಡಿ ಚರ್ಚಿಸಿದರು.

Advertisement

ಕಾಂಗ್ರೆಸ್‌ ಶಾಸಕರಾದ ರಮೇಶ್‌ ಜಾರಕಿಹೊಳಿ ಹಾಗೂ ಡಾ.ಕೆ.ಸುಧಾಕರ್‌ ಅವರು ಬಿಜೆಪಿ ಹಿರಿಯ ನಾಯಕ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬೆನ್ನಲ್ಲೇ ನಡೆದ ಈ ಭೇಟಿ ಕುತೂಹಲ ಮೂಡಿಸಿದೆ. ಈ ಸಂದರ್ಭದಲ್ಲಿ ಸಚಿವ ಜಮೀರ್‌ ಅಹಮದ್‌ ಸಹ ಉಪಸ್ಥಿತರಿದ್ದರು.

ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ, ಕಾಂಗ್ರೆಸ್‌ ಶಾಸಕರ ನಡೆ, ಆಪರೇಷನ್‌ ಕಮಲದ ಪ್ರಯತ್ನ, ಅದನ್ನು ತಡೆಯಲು ರೂಪಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದರು. ಬಿಜೆಪಿಯತ್ತ ದೃಷ್ಟಿ ಹಾಯಿಸಿರುವ ಕಾಂಗ್ರೆಸ್‌ ಶಾಸಕರನ್ನು ತಡೆಯುವ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಬಿಜೆಪಿ ಸಂಪರ್ಕದಲ್ಲಿರುವ ಶಾಸಕರನ್ನು ಕರೆದು ಖುದ್ದು ಮಾತನಾಡುವಂತೆ ಸಿದ್ದರಾಮಯ್ಯ ಅವರಿಗೂ ಸಿಎಂ ಮನವಿ ಮಾಡಿದರು. ಸಂಪುಟ ಪುನಾರಚನೆ ಬಗ್ಗೆಯೂ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾದ ಕೆಲವು ಶಾಸಕರನ್ನು ಅಲ್ಲಿಂದಲೇ ದೂರವಾಣಿ ಮೂಲಕ ಸಂಪರ್ಕಿಸಿ, ಮುಂದೆ ಉತ್ತಮ ಅವಕಾಶಗಳಿವೆ. ಬಿಜೆಪಿಯ ಆಮಿಷಗಳಿಗೆ ಬಲಿಯಾಗಬೇಡಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದರು.

ಸಿದ್ದರಾಮಯ್ಯ ಅವರ ಭೇಟಿಯ ನಂತರ ಸಚಿವ ಜಮೀರ್‌ ಅಹಮದ್‌ ಅವರೊಂದಿಗೂ ಕುಮಾರಸ್ವಾಮಿ ಪ್ರತ್ಯೇಕವಾಗಿ ಮಾತುಕತೆ ನಡೆಸಿ, ‘ಆಪರೇಷನ್‌ ಕಮಲ’ ಕಾರ್ಯಾಚರಣೆ ವಿಫ‌ಲಗೊಳಿಸುವ ಸಂಬಂಧ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next