Advertisement

ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕ

01:00 AM Jul 27, 2019 | Sriram |

ಬೆಂಗಳೂರು: ಮೈತ್ರಿ ಸರ್ಕಾರ ಪತನಗೊಂಡು ಆಡಳಿತ ಮತ್ತು ಪ್ರತಿಪಕ್ಷಗಳು ಅದಲು, ಬದಲಾಗಿದ್ದು, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ತಕ್ಷಣಕ್ಕೆ ಪ್ರತಿಪಕ್ಷದ ನಾಯಕರಾಗಲಿದ್ದಾರೆ.

Advertisement

ಅಧಿಕಾರ ಕಳೆದುಕೊಂಡು ಕಾಂಗ್ರೆಸ್‌ ಪ್ರತಿಪಕ್ಷದ ಸ್ಥಾನದಲ್ಲಿ ಕೂಡುವ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಪ್ರತಿಪಕ್ಷದ ನಾಯಕರು ಯಾರಾಗ ಬೇಕು ಎನ್ನುವ ಜಿಜ್ಞಾಸೆ ಕಾಂಗ್ರೆಸ್‌ನಲ್ಲಿ ಚರ್ಚಿತವಾಗುತ್ತಿದೆ.

ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮುಂದುವರಿಸಿಕೊಂಡು, ಪ್ರತಿಪಕ್ಷದ ನಾಯಕರನ್ನಾಗಿ ಬೇರೆಯವರನ್ನು ಮಾಡಬೇಕು ಎನ್ನುವ ಚರ್ಚೆ ಕಾಂಗ್ರೆಸ್‌ನಲ್ಲಿ ಆರಂಭವಾಗಿದೆ. ಆದರೆ,ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಬಹುಮತ ಸಾಬೀತು ಪಡಿಸಲು ಅಧಿವೇಶನ ಕರೆಯಲಾಗಿದ್ದು, ಇದೇ ಸಂದರ್ಭದಲ್ಲಿ ಮಹತ್ವದ ಹಣಕಾಸು ವಿಧೇಯಕ ಮಂಡನೆಯಾಗಿ,
ಅಂಗೀಕಾರವಾಗಬೇಕಿದೆ.

ಹೀಗಾಗಿ, ತಕ್ಷಣಕ್ಕೆ ಹೊಸ ನಾಯಕನ ಹುಡುಕಾಟ ನಡೆಸುವ ಬದಲು ಈಗಾಗಲೇ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರನ್ನೇ ಪ್ರತಿಪಕ್ಷದ ನಾಯಕರನ್ನಾಗಿ ಮುಂದುವರಿಸಿ, ಅಗತ್ಯ ಬಿದ್ದರೆ, ಮುಂದಿನ ದಿನಗಳಲ್ಲಿ ಹೊಸ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡುವ ಬಗ್ಗೆ ಕಾಂಗ್ರೆಸ್‌ ಹೈ
ಕಮಾಂಡ್‌ ಚಿಂತನೆ ನಡೆಸಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next