ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿರುವ ಸಿದ್ಧೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಲು ಬಂದಿದ್ದೇನೆ. ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದು, ಶ್ರೀಗಳ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು.
ಸೋಮವಾರ ಹೆಲಿಕಾಪ್ಟರ್ ಮೂಲಕ ನಗರಕ್ಕೆ ಆಗಮಿಸಿದ ಅವರು, ಜ್ಞಾನಯೋಗಾಶ್ರಮಕ್ಕೆ ತೆರಳಿ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ಧರಾಮಯ್ಯ, ನಾಡುಕಂಡ ಅಪರೂಪದ ಸಂತ ಸಿದ್ಧೇಶ್ವರರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಆಕ್ಸಿಜನ್ ನೀಡಿರುವ ಕಾರಣ ಕಣ್ಣು ಮುಚ್ಚಿಕೊಂಡಿದ್ದ ಶ್ರೀಗಳು ಮಾತನಾಡಲು ಸಾಧ್ಯವಾಗಲಿಲ್ಲ. ಆದರೆ ವೈದ್ಯರು ಶ್ರೀಗಳ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ. ಆಧ್ಯಾತ್ಮಿಕ ಆಳವಾಗಿ ಜ್ಞಾನ ಹೊಂದಿರುವ ಸಿದ್ದೇಶ್ವರ ಶ್ರೀಗಳು ನಾಡುಕಂಡ ಮಹಾನ್ ಸಂತ ಎಂದು ಬಣ್ಣಿಸಿದರು.
ಇದನ್ನೂ ಓದಿ:ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಸಿಎಂ ಬೊಮ್ಮಾಯಿ ವಿಶ್ವಾಸ
ಸಮಾಜ ಹಾಗೂ ಜನರಲ್ಲಿ ಧಾರ್ಮಿಕ ಮೂಡಿಸುವಲ್ಲಿ ಸಿದ್ಧೇಶ್ವರ ಶ್ರೀಗಳ ಪಾತ್ರ ಬಹುಮುಖ್ಯವಾಗಿದೆ. ತಮ್ಮ ಸಾತ್ವಿಕ ಪ್ರವಚನದ ಮೂಲಕ ಧರ್ಮದ ಬಗ್ಗೆ ತಪ್ಪು ತಿಳುವಳಿಕೆಗಳು, ಮನುಷ್ಯ ತನಗಾಗಿ ಧರ್ಮವನ್ನು ಸೃಷ್ಟಿಸಿಕೊಂಡಿದ್ದಾನೆ ಎಂದು ಧರ್ಮದ ಬಗ್ಗೆ ವಿಶ್ಲೇಷಿಸುತ್ತಿದ್ದರು ಎಂದರು.