Advertisement

ಸಿದ್ದರಾಮಯ್ಯ ಮೋದಿ ಕ್ಷಮೆಯಾಚಿಸಲಿ

02:55 PM Apr 21, 2019 | Team Udayavani |

ಚಿಕ್ಕೋಡಿ: ಪ್ರಧಾನಿ ನರೇಂದ್ರ ಮೋದಿ ಕಂಡರೆ ಕಾಂಗ್ರೆಸ್‌ ನಾಯಕರಿಗೆ ಭಯ ಶುರುವಾಗಿದೆ. ಹೀಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೋದಿಯವರ ಬಗ್ಗೆ ಹಗುರವಾಗಿ ಮಾತನಾಡಲು ಹೊರಟಿದ್ದಾರೆ. ಅವರು ಕೂಡಲೇ ಮೋದಿಯವರ ಕ್ಷಮೆ ಯಾಚನೆ ಮಾಡಬೇಕು ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.

Advertisement

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿಯಲ್ಲಿ ರಾಹುಲ್ ಗಾಂಧಿ ಜತೆ ಪ್ರಚಾರಕ್ಕೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಮೋದಿಯವರಿಗೆ ಏಕವಚನದಲ್ಲಿ ಮಾತನಾಡಿದ್ದು ಶೋಭೆ ತರುವುದಿಲ್ಲ, ವಿಶ್ವಮಟ್ಟದಲ್ಲಿ ಹೆಸರು ಮಾಡಿದ ಮೋದಿಯವರನ್ನು ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು ಈ ರೀತಿ ಮಾತನಾಡಬಾರದು ಎಂದರು. ರಾಜ್ಯದಲ್ಲಿ ಆಡಳಿತ ನಡೆಸಿದ ಸಿದ್ದರಾಮಯ್ಯ ಜಾತಿ, ಜಾತಿಗಳ ಮಧ್ಯೆ ಸಂಘರ್ಷ ಹಚ್ಚಿದ್ದರು. ತಮ್ಮ ಆಪ್ತ ಸಚಿವರಿಗೆ ಧರ್ಮ ಒಡೆಯಲು ಪ್ರೇರಣೆ ನೀಡಿದರು. ಇಂತಹ ಕಾಂಗ್ರೆಸ್‌ ನಾಯಕರಿಗೆ ಬುದ್ಧಿ ಕಲಿಸಲು ಈ ಚುನಾವಣೆಯಲ್ಲಿ ಮತದಾರರು ಬಿಜೆಪಿ ಕೈಹಿಡಿಯಲಿದ್ದಾರೆ. ಉಕ ಅಭಿವೃದ್ಧಿಯಾಗಲು ಬಿಜೆಪಿ ಸರ್ವ ಪ್ರಯತ್ನ ಮಾಡಿದೆ. ಆದರೆ ಕೇಂದ್ರ ಸರ್ಕಾರದಿಂದ ಬರುವ ಅನುದಾನವನ್ನು ಮುಖ್ಯಮಂತ್ರಿಗಳು ದಕ್ಷಿಣ ಕರ್ನಾಟಕಕ್ಕೆ ನೀಡುವ ಮೂಲಕ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿದರು.

ಮಹದಾಯಿ ಕುಡಿಯುವ ನೀರಿಗಾಗಿ ಯೋಜನೆ ರೂಪಿಸಲು ಮುಖ್ಯಮಂತ್ರಿಗಳು ಬಜೆಟ್ದಲ್ಲಿ ಅನುದಾನ ಮೀಸಲಿಡಲಿಲ್ಲ, ಕೇಂದ್ರದಿಂದ ಬರುವ ಅನುದಾನವನ್ನು ಮಂಡ್ಯ, ಹಾಸನಕ್ಕೆ ಕೊಡುವ ಮೂಲಕ ಉಕ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಸಮ್ಮಿಶ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಜೊಲ್ಲೆ ಪರ ಸವದಿ ಬಿರುಸಿನ ಪ್ರಚಾರ

ಅಥಣಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ 1 ಲಕ್ಷ ಮತಗಳಿಗೂ ಅಧಿಕ ಅಂತರದಲ್ಲಿ ಜಯಶಾಲಿಯಾಗುತ್ತಾರೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಅಥಣಿ ಪಟ್ಟಣದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಜೊತೆ ಪಾದಯಾತ್ರೆ ಸಂದರ್ಭದಲ್ಲಿ ಅವರು ಮಾತನಾಡಿ, ಅಥಣಿ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಅಣ್ಣಸಾಹೇಬ ಜೊಲ್ಲೆಗೆ 25 ಸಾವಿರಕ್ಕೂ ಅಧಿಕ ಮತಗಳು ಬರಲಿವೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಸಾಹೇಬ ಜೊಲ್ಲೆ ಮಾತನಾಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿಯೂ ಮತದಾರರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಚಿಕ್ಕೋಡಿಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ನಂತರದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಕೂಡ ಹೆಚ್ಚಿದೆ ಎಂದರು. ಪಾದಯಾತ್ರೆಯ ನೇತೃತ್ವವನ್ನು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಉಮೇಶ ಬಂಟೋಡಕರ ವಹಿಸಿದ್ದರು. ಆನಂದ ದೇಶಪಾಂಡೆ, ಆನಂದ ಟೊನಪೆ, ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next