Advertisement

Siddaramaiah ಪ್ರೇರಣೆ..: ಡಾ. ಸುಧಾಕರ್ ವಿರುದ್ಧ ತಿರುಗಿ ಬಿದ್ದ ಎಂಟಿಬಿ ನಾಗರಾಜ್

05:57 PM May 17, 2023 | Team Udayavani |

ಬೆಂಗಳೂರು : ಬಿಜೆಪಿ ಸೇರಲು ಸಿದ್ದರಾಮಯ್ಯರವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ರವರು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ? ಇಷ್ಟು ದಿನ ಮೌನವಾಗಿದ್ದು?ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು? ಎಂದು ಮಾಜಿ ಸಚಿವ ಡಾ. ಸುಧಾಕರ್ ಅವರ ವಿರುದ್ಧ ಮಾಜಿ ಸಚಿವ ಎಂಟಿಬಿ ನಾಗರಾಜ್ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

Advertisement

”ಮಾಜಿ ಸಚಿವರಾದ ಸುಧಾಕರ್ ರವರು ಇಂದು ಮಾನ್ಯ ಸಿದ್ದರಾಮಯ್ಯ ರವರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು?” ಎಂದು ಎಂಟಿಬಿ ನಾಗರಾಜ್ ಪ್ರಶ್ನಿಸಿದ್ದಾರೆ.

”ಮಾನ್ಯ ಸಿದ್ದರಾಮಯ್ಯ ರವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ.” ಎಂದು ಎಂಟಿಬಿ ನಾಗರಾಜ್ ಟ್ವೀಟ್ ನಲ್ಲಿ ಬರೆದಿದ್ದಾರೆ.

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು.ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಡಾ. ಸುಧಾಕರ್ ಬುಧವಾರ ಮೂರು ಟ್ವೀಟ್ ಗಳನ್ನು ಮಾಡಿ ಹೊಸ ಚರ್ಚೆ ಹುಟ್ಟು ಹಾಕಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next