Advertisement

ಇಂಥ ಕೆಟ್ಟ ರಾಜಕೀಯವನ್ನು ನಾನೆಂದೂ ನೋಡಿರಲಿಲ್ಲ: ಬಿಜೆಪಿ ವಿರುದ್ಧ ಸಿದ್ದು ಆಕ್ರೋಶ

10:31 AM Feb 15, 2023 | Team Udayavani |

ಬೆಂಗಳೂರು: ಈ ಸರ್ಕಾರ ರಾಜ್ಯದ ಬೊಕ್ಕಸವನ್ನು ಬೇಕಾಬಿಟ್ಟಿಯಾಗಿ ಲೂಟಿ ಮಾಡಲು ಆರಂಭ ಮಾಡಿದೆ. ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು ಚುನಾವಣೆಗೆ ದುಡ್ಡು ಮಾಡಿಕೊಳ್ಳುವ ಉದ್ದೇಶದಿಂದ ಯಾವೆಲ್ಲ ಶಾಸಕರಿಗೆ ಮಂತ್ರಿ ಆಗದೆ ಇರುವುದರಿಂದ ಅಸಮಧಾನ ಇದೆ ಅವರಿಗೆ ದುಡ್ಡು ಮಾಡಿಕೊಡಲು ತರಾತುರಿನಲ್ಲಿ ಕೆಬಿಜೆಎಲ್‌ ನಲ್ಲಿ, ವಿಶ್ವೇರಯ್ಯ ನೀರಾವರಿ ನಿಗಮದಲ್ಲಿ, ಕರ್ನಾಟಕ ನೀರಾವರಿ ನಿಗಮದಲ್ಲಿ ಸಭೆಯನ್ನು ಕರೆದು ಯೋಜನೆಗಳಿಗೆ ಅನುಮೋದನೆ ಪಡೆಯುತ್ತಿದ್ದಾರೆ. ಇದರಲ್ಲಿ ಪಾರದರ್ಶಕತೆ ಇಲ್ಲ. ಟೆಂಡರ್‌ ಹಣವನ್ನು ಕೂಡ ಎರಡು, ಮೂರು ಪಟ್ಟು ಹೆಚ್ಚಿಗೆ ಮಾಡಿಕೊಂಡಿದ್ದಾರೆ, ರಾಜ್ಯದಲ್ಲಿ ಜನಜನಿತವಾಗಿರುವ 40% ಕಮಿಷನ್‌ ನ ಮುಂದುವರೆದ ಭಾಗವಿದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಸುದ್ದಿಗೋಷ್ಠಿ ಮಾತನಾಡಿದ ಅವರು, ಜನರ ತೆರಿಗೆ ಹಣವನ್ನು ರಕ್ಷಣೆ ಮಾಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿ. ಟೆಂಡರ್‌ ಹಣವನ್ನು ಹೆಚ್ಚು ಮಾಡಿದ್ದಾರೆ, ಯಾರು ಹೆಚ್ಚು ಕಮಿಷನ್‌ ನೀಡುತ್ತಾರೆ ಅವರಿಗೆ ಕಾಮಗಾರಿ ಕೊಡುತ್ತಿದ್ದಾರೆ, ತಮಗೆ ಬೇಕಾದ ಗುತ್ತಿಗೆದಾರರನ್ನು ಹುಡುಕಿ ಕೆಲಸ ನೀಡುತ್ತಿದ್ದಾರೆ. ಹೀಗೆ ಮಾಡಿ ಕಮಿಷನ್‌ ವಸೂಲಿ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೋಕೋಪಯೋಗಿ, ನೀರಾವರಿ, ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸುಮಾರು 20,000 ಕೋಟಿ ರೂ. ಬಾಕಿ ಬಿಲ್‌ ಇದೆ. 10% ಕಮಿಷನ್‌ ಕೊಟ್ಟವರಿಗೆ ಕೆಲಸ ಮಾರಾಟ ಮಾಡುವ ನಡೆಯುತ್ತಿದೆ, ಇದು ಮುಖ್ಯಮಂತ್ರಿ ಕಚೇರಿಯಿಂದಲೇ ಆರಂಭವಾದುದ್ದು. ಇದನ್ನು ತಡೆಗಟ್ಟಬೇಕಾದುದ್ದು ಅಗತ್ಯ. ಇದನ್ನು ಸದನದಲ್ಲಿ ಕೂಡ ಪ್ರಸ್ತಾಪ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಸರ್ಕಾರ ಯೋಜನೆಗಳ ಟೆಂಡರ್ ಮೊತ್ತ ಹೆಚ್ಚಿಸಿಕೊಂಡು ಭ್ರಷ್ಟಾಚಾರ ಮಾಡುತ್ತಿದೆ: ಕಾಂಗ್ರೆಸ್ ಆರೋಪ

ಸರ್ಕಾರಕ್ಕೆ, ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ, ಮುಂದೆ ಕಾನೂನುಬಾಹಿರವಾಗಿ ಈ ರೀತಿ ಮಾಡಿದರೆ ನೀವು ಸಿಕ್ಕಿಹಾಕಿಕೊಳ್ಳುತ್ತೀರ, ಈ ವಿಚಾರವನ್ನು ತಾತ್ವಿಕ ಅಂತ್ಯ ಕಾಣಿಸುವವರೆಗೆ ನಾವು ಬಿಡುವುದಿಲ್ಲ. ನ್ಯಾಯಾಲಯದಲ್ಲಿ ಇವರ ವಿರುದ್ಧ ನಾವು ಸಿವಿಲ್‌ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತೇವೆ, ಇಂದು ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಗಾಳಿ ಬೀಸಲು ಆರಂಭವಾಗಿದೆ, ಹೀಗಾಗಿ ಮುಂದೆ ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ, ನಾವು ತನಿಖಾ ಆಯೋಗ ರಚನೆ ಮಾಡಿ ಎಲ್ಲವನ್ನೂ ತನಿಖೆ ಮಾಡಿಸಿ, ಯಾರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ ಅವೆಲ್ಲವನ್ನೂ ಬಯಲಿಗೆಳೆಯುತ್ತೇವೆ. ಇಂಥ ಕೆಟ್ಟ ರಾಜಕೀಯವನ್ನು ನಾನು ಎಂದೂ ನೋಡಿರಲಿಲ್ಲ ಎಂದರು.

Advertisement

ಮಾತೆತ್ತಿದರೆ ದಾಖಲೆ ಕೊಡಿ ಎಂದು ಕೇಳುತ್ತಾರೆ, ಗೂಳಿಹಟ್ಟಿ ಶೇಖರ್‌ ಅವರು ಬರೆದಿರುವ ಪತ್ರ ದಾಖಲೆಯಲ್ಲವೇ? ಯತ್ನಾಳ್‌, ವಿಶ್ವನಾಥ್‌, ಮಠಾಧೀಶರು ಹೇಳುವ ಮಾತುಗಳು ದಾಖಲೆಯಲ್ವಾ? ಈ ಸರ್ಕಾರಕ್ಕೆ ಮಾನ ಮರ್ಯಾದಿ ಇದೆಯಾ? ಪ್ರತಿಯೊಂದಕ್ಕು ನಿಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿರಲಿಲ್ವಾ ಅನ್ನುತ್ತಾರೆ. ಇಂಥಾ ಭ್ರಷ್ಟ ಸರ್ಕಾರ ಯಾವ ಕಾಲದಲ್ಲೂ ಬಂದಿರಲಿಲ್ಲ. ಬಸವರಾಜ ಬೊಮ್ಮಾಯಿ ಅವರೇ ಈ ಸರ್ಕಾರದ ಮುಖ್ಯಸ್ಥರು. ಅವರ ಕಚೇರಿಯಿಂದಲೇ ಇವೆಲ್ಲ ಆರಂಭವಾಗುವುದು. ನಿಗಮಗಳ ಬೋರ್ಡ್‌ ಮೀಟಿಂಗ್‌ ಗಳು ನಡೆಯುವುದು ಅವರ ಅಧ್ಯಕ್ಷತೆಯಲ್ಲಿಯೇ. ಟೆಂಡರ್‌ ಕರೆದು ಅದರ ಮೊತ್ತವನ್ನು ಇವರೇ ಹೇಳಿಕೊಟ್ಟು ಹೆಚ್ಚು ಮಾಡಿಸಿ, ಲಂಚವನ್ನು ಪಡೆಯುತ್ತಿದ್ದಾರೆ ಎಂದು ಆರೋಪ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next