Advertisement
ತಮ್ಮ ಬಗ್ಗೆ ಸಿದ್ರಾಮುಲ್ಲಾ ಖಾನ್ ಎಂದು ಬಿಜೆಪಿ ಮಾಡಿರುವ ಟೀಕೆಗೆ ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟನೆ ನೀಡಿರುವ ಅವರು, ಸಿದ್ರಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ. ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಗೋವಿಂದ ಭಟ್ಟರ ಶಿಷ್ಯನಾಗಿ ಈಗಲೂ ನಮ್ಮ ಆತ್ಮಸಾಕ್ಷಿಯನ್ನು ಎಚ್ಚರಿಸುತ್ತಲೇ ಇರುವ ಸಂತ ಶಿಶುನಾಳ ಷರೀಪರ ಪರಂಪರೆ ನಮ್ಮದು. ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಸಂತ ರಮಾನಂದರ ಶಿಷ್ಯತ್ವವನ್ನು ಒಪ್ಪಿಕೊಂಡು ಜಗಮೆಚ್ಚಿದ ಸೂಫಿ ಕವಿ ಕಬೀರನೂ ನಮ್ಮದೇ ಪರಂಪರೆಯವರು. ಆದ್ದರಿಂದ ಮುಸ್ಲಿಮ್ ಹೆಸರನ್ನು ನನ್ನ ಹೆಸರಿಗೆ ಜೋಡಿಸುವ ಮೂಲಕ ಜಾತ್ಯತೀತತೆಯ ಮೇಲಿನ ನನ್ನ ನಂಬಿಕೆಯನ್ನು ಅವರು ಪುರಸ್ಕರಿಸಿದ್ದಾರೆಂದು ಎಂದು ತಿಳಿದುಕೊಳ್ಳುವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Related Articles
Advertisement
ಇದು ಅವರ ಸೋಲು, ಹತಾಶೆ ಮತ್ತು ಅಸಹಾಯಕತೆಯನ್ನು ಸೂಚಿಸುತ್ತದೆ. ಒಂದು ಕಾಲದಲ್ಲಿ ಒಂದಷ್ಟು ಸಭ್ಯಸ್ಥರು ಇದ್ದ ಪಕ್ಷ ಇಂತಹ ನೈತಿಕ ರ್ಧಃ ಪತನಕ್ಕೆ ಬಿದ್ದಿರುವುದರ ಬಗ್ಗೆ ನಾವೆಲ್ಲ ಸಾಮೂಹಿಕವಾಗಿ ಸಂತಾಪ ಸೂಚಿಸೋಣ ಎಂದು ವ್ಯಂಗ್ಯವಾಡಿದರು.
ಹಿಂದೂ ಕೋಮುವಾದದಷ್ಟೇ ಸ್ಪಷ್ಟತೆ ಮತ್ತು ಬದ್ದತೆಯಿಂದ ನಾನು ಮುಸ್ಲಿಮ್ ಮತ್ತಿತರ ಧರ್ಮಗಳ ಕೋಮುವಾದವನ್ನೂ ವಿರೋಧಿಸುತ್ತಾ ಬಂದಿದ್ದೇನೆ. ಭಾರತೀಯ ಜನತಾ ಪಕ್ಷದ ರೀತಿಯಲ್ಲಿ ರಾಜಕೀಯ ಕಾರಣಕ್ಕಾಗಿ ಒಳ್ಳೆಯವರು-ಕೆಟ್ಟವರು ಎಂಬ ಭೇದವಿಲ್ಲದೆ ಸಾರಾಸಗಟಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡ ಕೋಮುವಾದದ ರಾಜಕೀಯವನ್ನು ನಾನು ಮಾಡಿದವನಲ್ಲ ಎಂದು ಹೇಳಿದ್ದಾರೆ.