Advertisement

ರಾಜ್ಯದಲ್ಲಿ ಸಿದ್ದರಾಮಯ್ಯ ಪ್ರೈ.ಲಿ. ಕಂಪನಿಯ ಆಡಳಿತ: ದೇವೇಗೌಡ

07:35 AM Aug 20, 2017 | |

ಬೆಳಗಾವಿ: ಕರ್ನಾಟಕದಲ್ಲಿ ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿಲ್ಲ. ಇಲ್ಲಿರುವುದು ಸಿದ್ದರಾಮಯ್ಯ ಸರಕಾರ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ವ್ಯಂಗ್ಯವಾಡಿದರು.

Advertisement

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್‌ ಪಕ್ಷ ಸಿದ್ದರಾಮಯ್ಯ ಪ್ರೈವೆಟ್‌ ಲಿಮಿಟೆಡ್‌ ಕಂಪನಿ ಆಗಿದೆ.

ತಮ್ಮಿಷ್ಟದಂತೆ ಸಿದ್ದರಾಮಯ್ಯ ಸರಕಾರ ನಡೆಸುತ್ತಿದ್ದಾರೆ ಎಂದು ಟೀಕಿಸಿದರು. ಬಿಜೆಪಿ, ಕಾಂಗ್ರೆಸ್‌ ಅಧಿ ಕಾರಾವಧಿಯಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಕುಮಾರಸ್ವಾಮಿ ಸದನದಲ್ಲಿ ಮಾತನಾಡಿದರೂ ರಾಜ್ಯ ಸರ್ಕಾರ ಮಾತ್ರ ಮೌನಕ್ಕೆ ಶರಣಾಗಿದೆ. ಈಗ ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿವೆ.

ಕಾಂಗ್ರೆಸ್‌ ಹಾಗೂ ಬಿಜೆಪಿ ಪರಸ್ಪರ ದೂಷಿಸುತ್ತ ರಾಜ್ಯವನ್ನು ಅಧೋಗತಿಯತ್ತ ಕೊಂಡೊಯ್ಯುತ್ತಿವೆ ಎಂದು 
ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next