ಬೆಂಗಳೂರು: ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರವನ್ನು 10ಪರ್ಸೆಂಟ್ ಕಮಿಷನ್ ಸರಕಾರವೆಂದು ಆರೋಪಿಸಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದ ಬೆನ್ನಲ್ಲೇ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚೆಗೆ ಬನ್ನಿ ಎಂದು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮಂಗಳವಾರ ಪಂಥಾಹ್ವಾನ ನೀಡಿದ್ದಾರೆ.
ಭ್ರಷ್ಟಾಚಾರ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮಾತನಾಡಲು ಸಂತಸಪಡುತ್ತೇನೆ. ಈ ಹಿನ್ನೆಲೆಯಲ್ಲಿ ಮೊದಲು ನಾಲ್ಕು ವಿಚಾರಗಳ ಬಗ್ಗೆ ಮಾತನಾಡಲು ನಾನು ಪ್ರಧಾನಿಗೆ ಆಹ್ವಾನ ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಯಾವುದೇ ಆ ನಾಲ್ಕು ವಿಷಯ?
1)ಲೋಕಪಾಲರನ್ನು ನೇಮಕ ಮಾಡಿ
Related Articles
2)ಜಡ್ಜ್ ಲೋಹಿಯಾ ಸಾವಿನ ಪ್ರಕರಣದ ವಿಚಾರಣೆ ನಡೆಸಿ
3)ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶಾ ಪುತ್ರ ಜಯ್ ಶಾ ಕಂಪನಿಯ ಆಸ್ತಿ ಬಗ್ಗೆ ತನಿಖೆ ನಡೆಸಿ
4) ಕಳಂಕವಿಲ್ಲದ ವ್ಯಕ್ತಿಯನ್ನು ನಿಮ್ಮ(ಬಿಜೆಪಿ) ಸಿಎಂ ಅಭ್ಯರ್ಥಿಯನ್ನಾಗಿಸಿ