Advertisement

ಪ್ರತ್ಯೇಕ ರಾಜ್ಯ ವಿಚಾರ: ಸಚಿವ ಕತ್ತಿ ಹೇಳಿಕೆಗೆ ಕಿಡಿಕಾರಿದ ಸಿದ್ದರಾಮಯ್ಯ

04:30 PM Jun 23, 2022 | Team Udayavani |

ಬೆಂಗಳೂರು: 2024ರಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುತ್ತದೆ ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Advertisement

ರಾಜ್ಯವನ್ನು ಇಬ್ಭಾಗ ಮಾಡುವ ಚರ್ಚೆ ಪ್ರಧಾನಿ ನರೇಂದ್ರ ಮೋದಿ ಅವರ‌ ಮಟ್ಟದಲ್ಲಿಯೇ ನಡೆಯುತ್ತಿದೆ ಎಂಬ ಆಘಾತಕಾರಿ ಸಂಗತಿಯನ್ನು‌ ಸಚಿವ ಉಮೇಶ್ ಕತ್ತಿ ಬಹಿರಂಗ ಪಡಿಸಿದ್ದಾರೆ. ಇದರ ಸತ್ಯಾಸತ್ಯತೆಗಳನ್ನು ಪ್ರಧಾನಿ ಮೋದಿ‌ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸಚಿವರಾದ ಉಮೇಶ್ ಕತ್ತಿಯವರು ಜವಾಬ್ದಾರಿ ಸ್ಥಾನದಲ್ಲಿರುವವರು. ಪಕ್ಷ ಇಲ್ಲವೆ ಸರ್ಕಾರದ ಮಟ್ಟದಲ್ಲಿ ಅಂತಹ ಚರ್ಚೆ ನಡೆಯದೆ ರಾಜ್ಯ ಒಡೆಯುವ ಯೋಜನೆಯ ಬಗ್ಗೆ ಮಾತನಾಡಿರಲಾರರು. ಅವರು ಹೇಳಿರುವುದು‌ ಸುಳ್ಳಾಗಿದ್ದರೆ ಇಂತಹ ಬೇಜವಾಬ್ದಾರಿ ಹೇಳಿಕೆಗಾಗಿ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದಿದ್ದಾರೆ.

ಇದನ್ನೂ ಓದಿ:ಮಧ್ಯಪ್ರದೇಶ; ಬುಲ್ಡೋಜರ್ ನಲ್ಲಿ ವಿವಾಹ ಸ್ಥಳಕ್ಕೆ ತೆರಳಿದ ವರ…ವಿಡಿಯೋ, ಫೋಟೋ ವೈರಲ್

ಸಾವಿರಾರು ಹಿರಿಯ ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಸ್ಥಾಪನೆಗೊಂಡ ಕರ್ನಾಟಕವನ್ನು ಒಡೆಯುವ ಯೋಚನೆ ಮಾಡುವುದೇ ನಾಡು- ನುಡಿಗೆ ಬಗೆವ ದ್ರೋಹವಾಗುತ್ತದೆ. ಸಚಿವ ಉಮೇಶ್ ಕತ್ತಿ ಅವರು ಪ್ರತ್ಯೇಕ ರಾಜ್ಯ ಸ್ಥಾಪನೆಯ ಕೂಗು ಹಾಕುತ್ತಿರುವುದು ಇದೇ ಮೊದಲ‌ಸಲವೇನಲ್ಲ. ಭಾಷಾ ಸೂಕ್ಷ್ಮ ಪ್ರದೇಶವಾದ ಬೆಳಗಾವಿಯಲ್ಲಿಯೇ ಇಂತಹ ಪ್ರಚೋದನಕಾರಿ ಹೇಳಿಕೆಗಳ ಪರಿಣಾಮದ ಹೊಣೆಯನ್ನು ರಾಜ್ಯ ಬಿಜೆಪಿ ಸರ್ಕಾರವೇ ಹೊರಬೇಕಾಗುತ್ತದೆ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next