Advertisement

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ: ಸಿದ್ದರಾಮಯ್ಯ

10:22 AM Dec 16, 2018 | |

ಮೈಸೂರು: ಸುಳ್ವಾಡಿ ದುರಂತ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಈ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜತೆ ಮಾತನಾಡುತ್ತೇನೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಅಸ್ವಸ್ಥರಾಗಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಶನಿವಾರ ಭೇಟಿ ಮಾಡಿ, ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಫ‌ುಡ್‌ ಪಾಯ್ಸನ್‌ನಿಂದ ಈ ದುರಂತ ಸಂಭವಿಸಿಲ್ಲ.

ಯಾರೋ ಪಾತಕಿಗಳು ಪ್ರಸಾದದಲ್ಲಿ ವಿಷ ಬೆರೆಸಿದ್ದಾರೆ. ಈ ಬಗ್ಗೆ ಉನ್ನತಮಟ್ಟದ ತನಿಖೆಯಾಗಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು.ಈಗಾಗಲೇ ಘಟನೆ ಬಗ್ಗೆ ತನಿಖೆಗೆ ಮುಖ್ಯಮಂತ್ರಿ ಆದೇಶ ಮಾಡಿದ್ದಾರೆ. ನಾನೂ ಕೂಡ ಅವರೊಂದಿಗೆ ಮಾತನಾಡಿ, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸುತ್ತೇನೆ ಎಂದರು. ವಿಷದ ಅಂಶ ನರದ ಒಳಗೆ ಸೇರಿರುವುದರಿಂದ ಅಸ್ವಸ್ಥರಿಗೆ ಇನ್ನೂ 48 ಗಂಟೆಗಳ ಚಿಕಿತ್ಸೆಯ ಅವಶ್ಯಕತೆಯಿದೆ. ಮೃತರ ಕುಟುಂಬಗಳಿಗೆ
ಸರ್ಕಾರ ತಲಾ 5 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದೆ. ಅಲ್ಲದೆ, ಮೃತಪಟ್ಟವರ ಕುಟುಂಬಗಳಿಗೆ ಕೆಪಿಸಿಸಿ ವತಿಯಿಂದ ತಲಾ 1 ಲಕ್ಷ ರೂ.ನೆರವು ಘೋಷಿಸಲಾಗಿದೆ. ಮೃತರ ಕುಟುಂಬದ ಮಕ್ಕಳ ಭವಿಷ್ಯದ ಬಗ್ಗೆ ಸರ್ಕಾರ ಗಮನ ಹರಿಸಲಿದೆ. ಮಕ್ಕಳ ವಿದ್ಯಾಭ್ಯಾಸ, ಜೀವನ ನಿರ್ವಹಣೆಗೆ ಸರ್ಕಾರ ನೆರವು ನೀಡಲಿದೆ ಎಂದು ತಿಳಿಸಿದರು. ಸಚಿವರಾದ ಸಿ. ಪುಟ್ಟರಂಗಶೆಟ್ಟಿ, ಜಮೀರ್‌ ಅಹಮ್ಮದ್‌ ಖಾನ್‌, ಸಂಸದ ಆರ್‌. ಧ್ರುವನಾರಾಯಣ್‌, ಮಾಜಿ ಸಂಸದ ಸಿ.ಎಚ್‌. ವಿಜಯಶಂಕರ್‌, ಹನೂರು ಶಾಸಕ ನರೇಂದ್ರ ಇತ ರರು ಹಾಜರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next