Advertisement

ಬರ್ತ್ ಡೇ ಜತೆ ಶಕ್ತಿ ಪ್ರದರ್ಶನ: ರಾಹುಲ್ ಗಾಂಧಿ ಜೊತೆ ಸಿದ್ದರಾಮಯ್ಯ ಪ್ರತ್ಯೇಕ ಚರ್ಚೆ?

12:41 PM Jun 28, 2022 | Team Udayavani |

ಬೆಂಗಳೂರು: ಭಾರತ್ ಜೋಡೋ ಯಾತ್ರೆ ಸಂಬಂಧ ದೆಹಲಿ ಭೇಟಿಗೆ ತೆರಳಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಸಮಾಲೋಚನೆ ಸಾಧ್ಯತೆಯಿದೆ.

Advertisement

ದಾವಣಗೆರೆಯಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶಕ್ಕೆ ರಾಹುಲ್ ಗಾಂಧಿಯವರನ್ನು ಆಹ್ವಾನಿಸಬೇಕೆಂದು ಸಿದ್ದರಾಮಯ್ಯ ಬೆಂಬಲಿಗರು ಸಲಹೆ ನೀಡಿದ್ದಾರೆ. ಈ ವಿಚಾರವನ್ನು ರಾಹುಲ್ ಗಾಂಧಿ ಜೊತೆ ಖುದ್ದು ಸಿದ್ದರಾಮಯ್ಯ ಪ್ರಸ್ತಾಪಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಸಿದ್ದರಾಮಯ್ಯ ಅಮೃತ ಮಹೋತ್ಸವ: ಕಾಂಗ್ರೆಸ್ ನಾಯಕರಿಗೆ ನಡುಕ ಆರಂಭ!

ರಾಹುಲ್ ಗಾಂಧಿಗೂ ಆಹ್ವಾನ ನೀಡುವುದರ ಜೊತೆಗೆ ಸಮಾವೇಶದ ಬಗ್ಗೆ ಚರ್ಚೆ ನಡೆಯಲಿದೆ. ಇಂದು ರಾತ್ರಿ ಇಲ್ಲವೇ ನಾಳೆ ಪ್ರತ್ಯೇಕವಾಗಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಬಣದ ಮೂಲಗಳು ತಿಳಿಸಿವೆ.

Advertisement

ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಬೇಕೆಂದು ಒತ್ತಾಯಿಸುತ್ತಿರುವ ಆಪ್ತ ಬಳಗ, ಸಿದ್ದರಾಮಯ್ಯರನ್ನ ಸಿಎಂ ಅಭ್ಯರ್ಥಿ ಎಂದು ಘೋಷಿಸದೆ ಇದ್ದಲ್ಲಿ ಪಕ್ಷಕ್ಕೆ ಹಿನ್ನಡೆ ಎಂಬ ವಾದ ಮುಂದಿಟ್ಟಿದೆ. ಹಾಗಾಗಿ ಜನ್ಮ ದಿನದ ನೆಪದಲ್ಲಿ ಶಕ್ತಿ ಪ್ರದರ್ಶನಕ್ಕೆ ಆಪ್ತ ಬಳಗದಿಂದ ಭರ್ಜರಿ ಯತ್ನ ನಡೆದಿದೆ ಎಂದು ಹೇಳಲಾಗುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next