Advertisement

ಕೂಡಲೇ ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಯಾಚಿಸಬೇಕು: ಕೆಎಸ್ ಈಶ್ವರಪ್ಪ ಆಗ್ರಹ

01:05 PM Nov 10, 2020 | keerthan |

ಶಿವಮೊಗ್ಗ: ಚುನಾವಣಾ ಫಲಿತಾಂಶದ ಬಳಿಕ ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದರು‌. ಸುಳ್ಳು ಹೇಳಿ ಜನರ ದಿಕ್ಕುತಪ್ಪಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಹಾಗಾಗಿ ಈ ಕೂಡಲೇ ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

Advertisement

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ‌ನಡೆದ ಎರಡು ಉಪಚುನಾವಣೆ ಹಾಗೂ ಬಿಹಾರ ಮತ್ತು ಮಧ್ಯಪ್ರದೇಶ ಚುನಾವಣೆ ಫಲಿತಾಂಶವನ್ನು ಸಂತೋಷದಿಂದ ಸ್ವಾಗತಿಸುತ್ತೇನೆ. ಕರ್ನಾಟಕ ರಾಜ್ಯದಲ್ಲಿ ಆರ್ ಆರ್ ನಗರ ಹಾಗೂ ಶಿರಾ ಚುನಾವಣಾ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಹೇಳಿದ್ದರು. ಕಾಂಗ್ರೆಸ್ ನಾಯಕರ ಮಾತನ್ನು ಸವಾಲಾಗಿ ಸ್ವೀಕರಿಸಿದ್ದೇನೆ. ಉಪಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಮುಂದೆ ಯಾವಾಗ ವಿಧಾನಸಭಾ ಚುನಾವಣೆ ನಡೆದರೂ ಬಿಜೆಪಿ ಗೆಲ್ಲಲಿದೆ ಎಂದರು.

ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಿ ಮುಂದಿನ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆಯಲಿದ್ದೇವೆ. ಉಪಚುನಾವಣೆ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿಯಾಗಿದೆ. ಶಿರಾ ಮತ್ತು ಆರ್ ಆರ್ ನಗರದ ಮತದಾರರು ಬಿಜೆಪಿ ಬೆನ್ನು ತಟ್ಟಿದ್ದಾರೆ ಎಂದು ಹೇಳಿದರು.

ಬಿಹಾರ ಚುನಾವಣೆ ಬಗ್ಗೆ ಸಮೀಕ್ಷೆಗಳು ಬೇರೆ ಬೇರೆ ರೀತಿ ಬಂದಿದ್ದವು. ಆದರೆ ಎನ್ ಡಿಎ ಅಧಿಕಾರವನ್ನು ಜನ ಒಪ್ಪಿದ್ದಾರೆ ಎನ್ನುವದನ್ನು ಬಿಹಾರ ಚುನಾವಣೆ ತೋರಿಸಿಕೊಟ್ಟಿದೆ. ದೇಶದಲ್ಲಿ‌ ಕಾಂಗ್ರೆಸ್ ಧೂಳಿಪಟವಾಗುತ್ತಿರುವುದು ಇಲ್ಲಿ ಸಾಬೀತಾಗಿದೆ. ನರೇಂದ್ರ ಮೋದಿ ಮತ್ತೆ ಮತ್ತೆ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಕೆ ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next