Advertisement

ಮುಖ್ಯಮಂತ್ರಿ ಕ್ಷಮೆ ಯಾಚಿಸದಿದ್ರೆ ಮಾನನಷ್ಟ ಮೊಕದ್ದಮೆ

03:00 AM Jul 05, 2017 | Karthik A |

ಬೆಂಗಳೂರು: ‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದೇ ಇದ್ದಿದ್ದರೆ ಅಮಿತ್‌ ಶಾ ಜೈಲಿನಲ್ಲಿರುತ್ತಿದ್ದರು’ ಎಂದು ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ ಮೂರು ದಿನಗಳಲ್ಲಿ ಕ್ಷಮೆ ಯಾಚಿಸದಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಪಂ.ದೀನ್‌ದಯಾಳ್‌ ಉಪಾಧ್ಯಾಯ ಅವರ ಅವರ ಜನ್ಮ ಶತಾಬ್ದಿ ಪ್ರಯುಕ್ತ ಬಿಜೆಪಿ ಆಯೋಜಿಸಿರುವ ವಿಸ್ತಾರಕ ಅಭಿಯಾನದಡಿ ಮಂಗಳವಾರ ಸಂಪಂಗಿರಾಮನಗರದಲ್ಲಿ ಮನೆ ಮನೆ ಸಂಪರ್ಕ ನಡೆಸಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

Advertisement

ಅಮಿತ್‌ ಶಾ ಕುರಿತಂತೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ ಗರಂ ಆದ ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ವಿರುದ್ಧ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಮಿತ್‌ ಶಾ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ 3 ದಿನಗಳಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಸಿದ್ದರಾಮಯ್ಯ ಬಹಿರಂಗ ಕ್ಷಮೆ ಕೇಳದಿದ್ದಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು. ಜತೆಗೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next