ಬೆಂಗಳೂರು: ಅಹಿಂದ ಸಮಾಜ ಶೇ 70 ರಿಂದ 80 ರಷ್ಟು ಕಾಂಗ್ರೆಸ್ ಗೆ ಮತ ನೀಡಿದೆ. ಆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುಬೇಕೆಂಬುದು ನಮ್ಮ ಆಶಯವಾಗಿದೆ ಎಂದು ಕುರುಬರ ಸಂಘ ಹೇಳಿದರ.
ಖಾಸಗಿ ಹೋಟೆಲ್ ನಲ್ಲಿ ರಾಜ್ಯ ಕುರುಬರ ಸಂಘದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿದರು. ಮಾಜಿ ಮೇಯರ್ ವೆಂಕಟೇಶ ಮೂರ್ತಿ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಆಗ್ರಹಿಸಿದರು.
ಉಪಮುಖ್ಯಮಂತ್ರಿ ಆಗಿ, ಹಣಕಾಸು ಸಚಿವರಾಗಿ, ಮುಖ್ಯಮಂತ್ರಿಯಾಗಿ ಅಪಾರ ಆಡಳಿತದ ಅನುಭವ ಹೊಂದಿದ್ದಾರೆ. ಅನೇಕ ಭಾಗ್ಯಗಳನ್ನು ನೀಡಿ ನಾಡು ಮೆಚ್ಚುವ ರೀತಿಯಲ್ಲಿ ಆಡಳಿತ ನೀಡಿದ್ದಾರೆ. ಆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಬೇಕು ಎಂದು ಕುರುಬ ಸಂಘ ಆಗ್ರಹಿಸಿತು.